ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಬಿ.ಎಸ್.ವೈ ಅವರು ಪ್ರಕರಣದ ಮೊದಲ ಆರೋಪಿ, ಅವರ ಸಹಚರ ವೈ.ಎಂ. ಅರುಣ್ 2ನೇ ಆರೋಪಿ, ಎಂ.ರುದ್ರೇಶ್ 3ನೇ ಆರೋಪಿ ಹಾಗೂ ಜಿ.ಮರಿಸ್ವಾಮಿ 4ನೇ ಆರೋಪಿಯಾಗಿದ್ದಾರೆ. ಇದೀಗ ಈ ನಾಲ್ವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಅಧಿಕಾರಿಗಳು ಸಲ್ಲಿಸಿರುವ ಈ 750 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಬಿಎಸ್‌ವೈ ಅವರು ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದು, ಅದಕ್ಕೆ ಪೂರಕವಾದ ಕೆಲ ವಿಡಿಯೋಗಳನ್ನು ತಮ್ಮ ಸಹಚರರ ಮೂಲಕ ಡಿಲೀಟ್ ಮಾಡಿಸಿರುತ್ತಾರೆ. ಇದರೊಂದಿಗೆ ಈ ಪ್ರಕರಣವನ್ನು ಮುಚ್ಚಿ ಹಾಕಲು 2 ಲಕ್ಷ ರೂ. ಕೊಟ್ಟಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಇನ್ನು ಈ ಚಾರ್ಜ್‌ಶೀಟ್‌ನಲ್ಲಿ ಮಹಿಳೆಯೋರ್ವರು ತಮ್ಮ ಪುತ್ರಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಕೊಡಿಸುವಂತೆ ಸಹಾಯ ಕೋರಿ ಯಡಿಯೂರಪ್ಪ ನಿವಾಸಕ್ಕೆ ಬಂದಿದ್ದಾರೆ. ಆಗ ಯಡಿಯೂರಪ್ಪ, ಅಪ್ರಾಪೆನಿಯನ್ನು ಕೋಣೆಗೆ ಕರೆದುಕೊಂಡು ಹೋಗಿ ಬಾಗಿಲು ಹಾಕಿಕೊಂಡು, ನಿನ್ನ ಮೇಲೆ ಕೃತ್ಯ ಎಸಗಿದ ಆರೋಪಿಯ ಮುಖ ನೆನಪಿದೆಯೇ ಎಂದು ಕೇಳುತ್ತಾ, ಅಪ್ರಾಪೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಬಳಿಕ ಬಾಲಕಿ ಗಾಬರಿಯಾಗಿದ್ದು, ಬಾಗಿಲು ತೆರೆಯುವಂತೆ ಹೇಳಿದಾಗ, ತಮ್ಮ ಜೇಬಿನಲ್ಲಿದ್ದ ಹಣವನ್ನು ಅಪ್ರಾಪ್ತೆಗೆ ನೀಡಿದ್ದಾರೆ. ಆ ನಂತರ ಕೋಣೆಯಿಂದ ಹೊರಗಡೆ ಬಂದು, ಬಾಲಕಿಯ ತಾಯಿಗೆ “ಈ ಕೇಸ್‌ನಲ್ಲಿ ಸಹಾಯ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿ, ಆಕೆಗೂ ಒಂದಷ್ಟು ಹಣ ಕೊಟ್ಟು ಕಳುಹಿಸಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ.
ಜೊತೆಗೆ ಪ್ರಕರಣದಲ್ಲಿ ಅಪ್ರಾಪ್ತೆಯ ತಾಯಿ ಮಾಡಿಕೊಂಡಿದ್ದ ವಿಡಿಯೋವನ್ನು ಆಕೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದರು. ಅದನ್ನು ಗಮನಿಸಿದ ಬಿಎಸ್‌ವೈ, ತಮ್ಮ ಸಹಚರರಾದ ಅರುಣ್, ರುದ್ರೇಶ್, ಮರಿಸ್ವಾಮಿ ಮೂಲಕ ವಿಡಿಯೋ ಡಿಲೀಟ್ ಮಾಡಿಸಿ, ಆಕೆಗೆ 2 ಲಕ್ಷ ರೂ. ಕೊಟ್ಟು ಕಳುಹಿಸಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖೀಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…