ವಿಶಾಖಪಟ್ಟಣಂ: ಓ ಮೈ ಗಾಡ್! ಡೈಲಾಗ್ ಖ್ಯಾತಿಯ ಟಿಕ್ ಟಾಕ್ ಸ್ಟ್ರಾರ್ ಚಿಪ್ಪಡಾ ಭಾರ್ಗವ್ ಅಲಿಯಾಸ್ ಫನ್ ಬಕೆಟ್ ಭಾರ್ಗವ್ ನನ್ನು ವಿಶಾಖಪಟ್ಟಣಂನಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಂಧ್ರ ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ.
ಸಂತ್ರಸ್ತೆಯ ಕುಟುಂಬ ಸದಸ್ಯರು ಏಪ್ರಿಲ್ 16ರಂದು ವಿಶಾಖಪಟ್ಟಣಂ ಕಮಿಷನರೇಟ್ ಅಡಿಯಲ್ಲಿ ಪೆಂಡುರ್ತಿ ಪೊಲೀಸ್ ಠಾಣೆಗೆ ದೂರು ನೀಡಿದಾಗ ಲೈಂಗಿಕ ದೌರ್ಜನ್ಯ ಬೆಳಕಿಗೆ ಬಂದಿದೆ. ಸಂತ್ರಸ್ತೆ ನಾಲ್ಕು ತಿಂಗಳ ಗರ್ಭಿಣಿ ಎಂದು ಕುಟುಂಬಕ್ಕೆ ತಿಳಿದ ನಂತರ ದೂರು ದಾಖಲಿಸಲಾಗಿದೆ. ನಂತರ ಆರೋಪಿಯನ್ನು ಆಂಧ್ರ ಪೊಲೀಸರು ಹೈದರಾಬಾದ್ ನ ಕೊಂಪಲ್ಲಿಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ : ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ : ಮಟ್ಟಾರು ರತ್ನಾಕರ ಹೆಗ್ಡೆ -Vishwanews24
ಆರೋಪಿ ಭಾರ್ಗವ್ ಸಂತ್ರಸ್ತೆಯನ್ನು ಕೆಲವು ಟಿಕ್ ಟಾಕ್ ವೀಡಿಯೊಗಳಲ್ಲಿ ನೋಡಿ ಆಕೆಯನ್ನು ಸಂಪರ್ಕಿಸಿ ಮಾಧ್ಯಮ ಚಾನೆಲ್ ಗಳಲ್ಲಿ ಆಫರ್ ಕೊಡಿಸುವುದಾಗಿ ಭರವಸೆ ನೀಡಿ ಬಳಿಕ ಆಕೆಗೆ ಪ್ರಪೋಸ್ ಮಾಡಿದ್ದಾನೆ. ಆದರೆ ಅದನ್ನು ಆಕೆ ತಿರಸ್ಕರಿಸಿದ್ದಳು. ಇದಾದ ಬಳಿಕ ಆಕೆಯ ವಿಡಿಯೋಗಳನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿದ್ದನು ಎಂದು ತಿಳಿದುಬಂದಿದೆ.
ಈ ಕುರಿತು ಮಾಹಿತಿ ನೀಡಿದ ಸಹಾಯಕ ಪೊಲೀಸ್ ಆಯುಕ್ತ ಪ್ರೇಮ್ ಕಾಜಲ್, ಸಂತ್ರಸ್ತೆ ಗರ್ಭಿಣಿಯಾಗಿದ್ದು, ಪೋಕ್ಸೊ ಕಾಯ್ದೆಯನ್ನು ಹೊರತುಪಡಿಸಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಲೈಂಗಿಕ ದೌರ್ಜನ್ಯಕ್ಕಾಗಿ ಶಿಕ್ಷೆ), 354 (ಮಹಿಳೆಗೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಅಡಿಯಲ್ಲಿ ಭಾರ್ಗವ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಆರೋಪಿಯನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಮೇ 3 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಘಟನೆ ಕುರಿತು ಪ್ರತಿಕ್ರಿಯಿಸಿರುವ ಬನ್ ಬಕೆಟ್ ಖ್ಯಾತಿಯ ನಿತ್ಯಾ ನಾನು ಕಳೆದ 12 ತಿಂಗಳುಗಳಿಂದ ಭಾರ್ಗವ್ ಅವರೊಂದಿಗೆ ಸಂಪರ್ಕದಲ್ಲಿರಲಿಲ್ಲ , ಸಾಮಾಜಿಕ ಮಾಧ್ಯಮಗಳ ಮೂಲಕ ಭಾರ್ಗವ್ ಬಂಧನದ ವಿಚಾರ ತಿಳಿದುಬಂದಿದೆ. ಇನ್ನು ಕೆಲವು ಸಾಮಾಜಿಕ ಮಾಧ್ಯಮಗಳು ಭಾರ್ಗವ್‌ನಿಂದ ಅತ್ಯಾಚಾರಕ್ಕೊಳಗಾದಂತೆ ಬಿಂಬಿಸಲು ಬಳಸುತ್ತಿರುವ ತನ್ನ ಫೋಟೋಗಳನ್ನು ಅಳಿಸುವಂತೆ ನಿತ್ಯ ಅವರು ಮನವಿ ಮಾಡಿಕೊಂಡಿದ್ದಾರೆ.
ಉಡುಪಿ : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಮೇ 29ಕ್ಕೆ ಅಂತಿಮ ತೀರ್ಪು -Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…