Featured

ಅಪ್ರಾಪ್ತ ವಯಸ್ಸಿನ ಬಾಲಕನಿಂದ ಫುಟ್‍ಪಾತ್ ಮೇಲೆ ಕಾರು ಚಾಲನೆ  : ನಾಲ್ವರು ಸಾವು – Vishwanews24

ಅಪ್ರಾಪ್ತ ವಯಸ್ಸಿನ ಬಾಲಕನಿಂದ ಫುಟ್‍ಪಾತ್ ಮೇಲೆ ಕಾರು ಚಾಲನೆ  : ನಾಲ್ವರು ಬಲಿ – Vishwanews24

ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಕಾರು ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಫುಟ್‍ಪಾತ್ ಮೇಲೆ ಸಂಚರಿಸಿದ್ದರಿಂದ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಕರೀಮ್‍ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಒಟ್ಟು ಮೂವರು ಅಪ್ರಾಪ್ತರು ಇದ್ದರು. ಅದರಲ್ಲಿ ಒಬ್ಬಾತ ಕಾರು ಡ್ರೈವ್ ಮಾಡುತ್ತಿದ್ದ. ಈ ಬಾಲಕರೆಲ್ಲರೂ 9ನೇ ತರಗತಿಯಲ್ಲಿ ಓದುತ್ತಿದ್ದಾರೆ.

ಕರೀಮ್‍ನಗರದ ಪ್ರದೇಶದಲ್ಲಿ ದಟ್ಟವಾದ ಮಂಜು ಇತ್ತು. ಇದರಿಂದಾಗಿ ಬಾಲಕನಿಗೆ ಸರಿಯಾಗಿ ದಾರಿ ಕಾಣುತ್ತಿರಲಿಲ್ಲ. ಈ ಮಧ್ಯೆ ಬಾಲಕ ತನ್ನ ಕಣ್ಣನ್ನು ಉಜ್ಜಿಕೊಳ್ಳಲು ಸ್ಟೀರಿಂಗ್‍ನಿಂದ ಕೈ ತೆಗೆದಾದ ನಿಯಂತ್ರಣ ಕಳೆದುಕೊಂಡಿದ್ದಾನೆ.

ಕಾರು ಡಿವೈಡರ್‍ಗೆ ಡಿಕ್ಕಿ ಹೊಡೆದು, ಅಲ್ಲೆ ಫುಟ್‍ಪಾತ್‍ನಲ್ಲಿ ಕುಳಿತಿದ್ದ ಮಹಿಳೆಯರ ಮೇಲೆ ಕಾರು ಹರಿದಿದೆ. ಘಟನೆಯಿಂದ 14 ವರ್ಷದ ಹುಡುಗಿ ಸೇರಿ 27-32 ವರ್ಷದೊಳಗಿನ ನಾಲ್ವರು ಮೃತಪಟ್ಟಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಡ್ರೈವಿಂಗ್‍ಗೆ ಕುಳಿತಿದ್ದ ಬಾಲಕ ಸ್ಟೀರಿಂಗ್ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಲ್ಲದೆ, ಬ್ರೇಕ್ ಬದಲಿಗೆ ಆಕ್ಸಿಲೇಟರ್ ಪ್ರೆಸ್ ಮಾಡಿದ್ದು, ದೊಡ್ಡ ಎಡವಟ್ಟಿಗೆ ಕಾರಣವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಕಾರಿನಲ್ಲಿದ್ದ ಮೂವರು ಅಪ್ರಾಪ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲ, ಕಾರು ಡ್ರೈವ್ ಮಾಡುತ್ತಿದ್ದ ಬಾಲಕನ ತಂದೆ ವಿರುದ್ಧವೂ ಕೇಸ್ ದಾಖಲಾಗಿದೆ.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

24 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago