ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಕಾರು ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಫುಟ್‍ಪಾತ್ ಮೇಲೆ ಸಂಚರಿಸಿದ್ದರಿಂದ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಕರೀಮ್‍ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಒಟ್ಟು ಮೂವರು ಅಪ್ರಾಪ್ತರು ಇದ್ದರು. ಅದರಲ್ಲಿ ಒಬ್ಬಾತ ಕಾರು ಡ್ರೈವ್ ಮಾಡುತ್ತಿದ್ದ. ಈ ಬಾಲಕರೆಲ್ಲರೂ 9ನೇ ತರಗತಿಯಲ್ಲಿ ಓದುತ್ತಿದ್ದಾರೆ.
ಕರೀಮ್‍ನಗರದ ಪ್ರದೇಶದಲ್ಲಿ ದಟ್ಟವಾದ ಮಂಜು ಇತ್ತು. ಇದರಿಂದಾಗಿ ಬಾಲಕನಿಗೆ ಸರಿಯಾಗಿ ದಾರಿ ಕಾಣುತ್ತಿರಲಿಲ್ಲ. ಈ ಮಧ್ಯೆ ಬಾಲಕ ತನ್ನ ಕಣ್ಣನ್ನು ಉಜ್ಜಿಕೊಳ್ಳಲು ಸ್ಟೀರಿಂಗ್‍ನಿಂದ ಕೈ ತೆಗೆದಾದ ನಿಯಂತ್ರಣ ಕಳೆದುಕೊಂಡಿದ್ದಾನೆ.
ಕಾರು ಡಿವೈಡರ್‍ಗೆ ಡಿಕ್ಕಿ ಹೊಡೆದು, ಅಲ್ಲೆ ಫುಟ್‍ಪಾತ್‍ನಲ್ಲಿ ಕುಳಿತಿದ್ದ ಮಹಿಳೆಯರ ಮೇಲೆ ಕಾರು ಹರಿದಿದೆ. ಘಟನೆಯಿಂದ 14 ವರ್ಷದ ಹುಡುಗಿ ಸೇರಿ 27-32 ವರ್ಷದೊಳಗಿನ ನಾಲ್ವರು ಮೃತಪಟ್ಟಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಡ್ರೈವಿಂಗ್‍ಗೆ ಕುಳಿತಿದ್ದ ಬಾಲಕ ಸ್ಟೀರಿಂಗ್ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಲ್ಲದೆ, ಬ್ರೇಕ್ ಬದಲಿಗೆ ಆಕ್ಸಿಲೇಟರ್ ಪ್ರೆಸ್ ಮಾಡಿದ್ದು, ದೊಡ್ಡ ಎಡವಟ್ಟಿಗೆ ಕಾರಣವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಕಾರಿನಲ್ಲಿದ್ದ ಮೂವರು ಅಪ್ರಾಪ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲ, ಕಾರು ಡ್ರೈವ್ ಮಾಡುತ್ತಿದ್ದ ಬಾಲಕನ ತಂದೆ ವಿರುದ್ಧವೂ ಕೇಸ್ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…