Featured

ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮುರುಘಾ ಶರಣರ ವಿರುದ್ಧ ಎಫ್ಐಆರ್ – Vishwanews24

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮುರುಘಾ ಶರಣರ ವಿರುದ್ಧ ಎಫ್ಐಆರ್

ಮೈಸೂರು: ತಮ್ಮದೇ ಮಠ ನಡೆಸುವ ಫ್ರೌಢಶಾಲೆಯ ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮೇಲೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ಮಠದ ಉಚಿತ ಹಾಸ್ಟೆಲ್‌ನಲ್ಲಿರುವ ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿ, ದೌರ್ಜನ್ಯಕ್ಕೆ ಒಳಗಾದವರೆನ್ನಲಾದ ವಿದ್ಯಾರ್ಥಿನಿಯರಿಬ್ಬರು ಮೈಸೂರಿನ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಡನಾಡಿ ಸಂಸ್ಥೆಗೆ ಶುಕ್ರವಾರ ದೂರು ನೀಡಿದ್ದಾರೆ. ದೂರು ಪಡೆದು, ಆಪ್ತ ಸಮಾಲೋಚನೆ ನಡೆಸಿರುವ ಸಂಸ್ಥೆಯು ಮಧ್ಯಾಹ್ನವೇ ಈ ಬಾಲಕಿಯರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದೆ.

ಹಾವಂಜೆ:ಅಕ್ರಮ ಮರಳುಗಾರಿಕೆ ಮೇಲೆ ದಾಳಿ ; ದೋಣಿ ಮತ್ತು ವಾಹನ ವಶ – Vishwanews24

ಇದೀಗ ಮಠದ ಸ್ವಾಮಿಜಿ ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್‌ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಶುಕ್ರವಾರ ದೂರು ದಾಖಲಾಗಿದೆ. ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್‌ ರಶ್ಮಿ ಎರಡನೇ ಆರೋಪಿಯಾಗಿದ್ದಾರೆ. ಮಠದ ಬಸವಾದಿತ್ಯ (ಮರಿಸ್ವಾಮಿ) ಮೂರನೇ ಆರೋಪಿ. ಮಠದ ಭಕ್ತರೆನ್ನಲಾದ ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ಕ್ರಮವಾಗಿ ನಾಲ್ಕು ಮತ್ತು ಐದನೇ ಆರೋಪಿಗಳು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್‌ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ದೂರು ’ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ‘ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ – Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago