Featured

ಅಫ್ಗಾನಿಸ್ತಾನದ ನಿರಾಶ್ರಿತರಿಗಾಗಿ ಪಾಕ್‌ನಲ್ಲಿ ಹೊಸ ಶಿಬಿರವನ್ನು ಸ್ಥಾಪಿಸುವುದಿಲ್ಲ : ಶೇಖ್ ರಶೀದ್ -Vishwanews24

ಅಫ್ಗಾನಿಸ್ತಾನದ ನಿರಾಶ್ರಿತರಿಗಾಗಿ ಪಾಕ್‌ನಲ್ಲಿ ಹೊಸ ಶಿಬಿರವನ್ನು ಸ್ಥಾಪಿಸುವುದಿಲ್ಲ : ಶೇಖ್ ರಶೀದ್ -Vishwanews24

ಇಸ್ಲಾಮಾಬಾದ್‌: ‘ಅಫ್ಗಾನಿಸ್ತಾನದ ನಿರಾಶ್ರಿತರಿಗಾಗಿ ಹೊಸ ಶಿಬಿರವನ್ನು ಸ್ಥಾಪಿಸುವುದಿಲ್ಲ’ ಎಂದು ಪಾಕಿಸ್ತಾನದ ಗೃಹ ಸಚಿವ ಶೇಖ್ ರಶೀದ್ ಅಹ್ಮದ್ ಅವರು ಹೇಳಿದ್ದಾರೆ.

‘ಈಗಾಗಲೇ ಪಾಕಿಸ್ತಾನದಲ್ಲಿ 30 ಲಕ್ಷ ಅಫ್ಗನ್ ನಿರಾಶ್ರಿತರು ಇದ್ದಾರೆ. ಅಲ್ಲದೆ ಪಾಕಿಸ್ತಾನಕ್ಕೆ ಪ್ರವೇಶಿಸಲು ಗಡಿ ಬಳಿ ಜನರು ಗುಂಪುಗೂಡಿದ್ದಾರೆ’ ಎಂದು ವರದಿಯೊಂದು ಹೇಳಿತ್ತು.

ಇದರ ಬೆನ್ನಲ್ಲೇ ಅಫ್ಗಾನೊಂದಿಗಿನ ಟಾರ್ಕಮ್‌ ಗಡಿ ಪ್ರದೇಶಕ್ಕೆ ರಶೀದ್‌ ಅವರು ಭಾನುವಾರ ಭೇಟಿ ನೀಡಿದರು. ಆ ಬಳಿಕ ಮಾತನಾಡಿದ ಅವರು,‘ ಟಾರ್ಕಮ್‌ ಗಡಿ ಪ್ರದೇಶದಲ್ಲಿ ಯಾವುದೇ ಅಫ್ಗನ್‌ ನಿರಾಶ್ರಿತರಿಲ್ಲ. ನಾವು ಇಲ್ಲಿ ಹೊಸ ಶಿಬಿರವನ್ನು ಸ್ಥಾಪಿಸಿಲ್ಲ’ ಎಂದು ಹೇಳಿದ್ದಾರೆ. ಈ ಬಗ್ಗೆ ಬಿಸಿನೆಸ್ ರೆಕಾರ್ಡರ್ ಪತ್ರಿಕೆ ವರದಿ ಮಾಡಿದೆ.

‘ಪಾಕಿಸ್ತಾನದಲ್ಲಿ ಅರ್ಧದಷ್ಟು ಅಫ್ಗನ್‌ ನಿರಾಶ್ರಿತರು ಕಾನೂನು ಬಾಹಿರವಾಗಿ ವಾಸವಾಗಿದ್ದಾರೆ. ಅವರು ಈವರೆಗೆ ದೇಶದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿಲ್ಲ. ಅಧಿಕೃತವಾಗಿ ನೊಂದಾಯಿಸಿಕೊಂಡಿರುವ 15 ಲಕ್ಷ ಜನರು ಮಾತ್ರ ಇಲ್ಲಿ ಉಳಿಯಲು, ಓಡಾಡಲು ಮತ್ತು ವ್ಯವಹಾರ ನಡೆಸುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿದ್ದಾರೆ’ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ತಿಳಿಸಿದರು.

‘ಅಫ್ಗಾನಿಸ್ತಾನದಲ್ಲಿ ಬಿಕ್ಕಟ್ಟು ನಿಯಂತ್ರಣಕ್ಕೆ ಬರುತ್ತಿದೆ. ಹಾಗಾಗಿ ಇನ್ನು ಮುಂದೆ ನಾವು ಅಫ್ಗನ್‌ ನಿರಾಶ್ರಿತರಿಗೆ ನಾವು ಅವಕಾಶ ನೀಡುವುದಿಲ್ಲ’ ಎಂದು ಪಾಕಿಸ್ತಾನ ಹೇಳಿತ್ತು. ಆದರೆ, ಸಚಿವರುಗಳು ಅಫ್ಗನ್‌ ನಿರಾಶ್ರಿತರಿಗೆ ಉಳಿಯಲು ಅವಕಾಶ ನೀಡುವುದಕ್ಕೆ ಸಂಬಂಧಿಸಿದಂತೆ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಪಾಕಿಸ್ತಾನವನ್ನು ಪ್ರವೇಶಿಸಲು ಅಫ್ಗಾನಿಸ್ತಾನದ 4,000 ಜನರಿಗೆ ವೀಸಾ ಮತ್ತು ಪ್ರಯಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕೃತವಾಗಿ ಪಾಕಿಸ್ತಾನ ಮಂಜೂರು ಮಾಡಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago