ಇಸ್ಲಾಮಾಬಾದ್: ‘ಅಫ್ಗಾನಿಸ್ತಾನದ ನಿರಾಶ್ರಿತರಿಗಾಗಿ ಹೊಸ ಶಿಬಿರವನ್ನು ಸ್ಥಾಪಿಸುವುದಿಲ್ಲ’ ಎಂದು ಪಾಕಿಸ್ತಾನದ ಗೃಹ ಸಚಿವ ಶೇಖ್ ರಶೀದ್ ಅಹ್ಮದ್ ಅವರು ಹೇಳಿದ್ದಾರೆ.
‘ಈಗಾಗಲೇ ಪಾಕಿಸ್ತಾನದಲ್ಲಿ 30 ಲಕ್ಷ ಅಫ್ಗನ್ ನಿರಾಶ್ರಿತರು ಇದ್ದಾರೆ. ಅಲ್ಲದೆ ಪಾಕಿಸ್ತಾನಕ್ಕೆ ಪ್ರವೇಶಿಸಲು ಗಡಿ ಬಳಿ ಜನರು ಗುಂಪುಗೂಡಿದ್ದಾರೆ’ ಎಂದು ವರದಿಯೊಂದು ಹೇಳಿತ್ತು.
ಇದರ ಬೆನ್ನಲ್ಲೇ ಅಫ್ಗಾನೊಂದಿಗಿನ ಟಾರ್ಕಮ್ ಗಡಿ ಪ್ರದೇಶಕ್ಕೆ ರಶೀದ್ ಅವರು ಭಾನುವಾರ ಭೇಟಿ ನೀಡಿದರು. ಆ ಬಳಿಕ ಮಾತನಾಡಿದ ಅವರು,‘ ಟಾರ್ಕಮ್ ಗಡಿ ಪ್ರದೇಶದಲ್ಲಿ ಯಾವುದೇ ಅಫ್ಗನ್ ನಿರಾಶ್ರಿತರಿಲ್ಲ. ನಾವು ಇಲ್ಲಿ ಹೊಸ ಶಿಬಿರವನ್ನು ಸ್ಥಾಪಿಸಿಲ್ಲ’ ಎಂದು ಹೇಳಿದ್ದಾರೆ. ಈ ಬಗ್ಗೆ ಬಿಸಿನೆಸ್ ರೆಕಾರ್ಡರ್ ಪತ್ರಿಕೆ ವರದಿ ಮಾಡಿದೆ.
‘ಪಾಕಿಸ್ತಾನದಲ್ಲಿ ಅರ್ಧದಷ್ಟು ಅಫ್ಗನ್ ನಿರಾಶ್ರಿತರು ಕಾನೂನು ಬಾಹಿರವಾಗಿ ವಾಸವಾಗಿದ್ದಾರೆ. ಅವರು ಈವರೆಗೆ ದೇಶದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿಲ್ಲ. ಅಧಿಕೃತವಾಗಿ ನೊಂದಾಯಿಸಿಕೊಂಡಿರುವ 15 ಲಕ್ಷ ಜನರು ಮಾತ್ರ ಇಲ್ಲಿ ಉಳಿಯಲು, ಓಡಾಡಲು ಮತ್ತು ವ್ಯವಹಾರ ನಡೆಸುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿದ್ದಾರೆ’ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ತಿಳಿಸಿದರು.
‘ಅಫ್ಗಾನಿಸ್ತಾನದಲ್ಲಿ ಬಿಕ್ಕಟ್ಟು ನಿಯಂತ್ರಣಕ್ಕೆ ಬರುತ್ತಿದೆ. ಹಾಗಾಗಿ ಇನ್ನು ಮುಂದೆ ನಾವು ಅಫ್ಗನ್ ನಿರಾಶ್ರಿತರಿಗೆ ನಾವು ಅವಕಾಶ ನೀಡುವುದಿಲ್ಲ’ ಎಂದು ಪಾಕಿಸ್ತಾನ ಹೇಳಿತ್ತು. ಆದರೆ, ಸಚಿವರುಗಳು ಅಫ್ಗನ್ ನಿರಾಶ್ರಿತರಿಗೆ ಉಳಿಯಲು ಅವಕಾಶ ನೀಡುವುದಕ್ಕೆ ಸಂಬಂಧಿಸಿದಂತೆ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಪಾಕಿಸ್ತಾನವನ್ನು ಪ್ರವೇಶಿಸಲು ಅಫ್ಗಾನಿಸ್ತಾನದ 4,000 ಜನರಿಗೆ ವೀಸಾ ಮತ್ತು ಪ್ರಯಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕೃತವಾಗಿ ಪಾಕಿಸ್ತಾನ ಮಂಜೂರು ಮಾಡಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…