Featured

ಅಫ್ಘಾನಿಸ್ತಾನದಲ್ಲಿ ಭಾರೀ ಭಯಾನಕ  ಭೂಕಂಪ: ಸಾವಿನ ಸಂಖ್ಯೆ 280 ಕ್ಕೆ ಏರಿಕೆ – Vishwanews24

ಅಫ್ಘಾನಿಸ್ತಾನದಲ್ಲಿ ಭಾರೀ ಭಯಾನಕ  ಭೂಕಂಪ: ಸಾವಿನ ಸಂಖ್ಯೆ 255ಕ್ಕೆ ಏರಿಕೆ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಬುಧವಾರ ಸಂಭವಿಸಿದ ಭಯಾನಕ ಭೂಕಂಪನದಲ್ಲಿ ಕನಿಷ್ಠ 280 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ದೇಶದ ಪೂರ್ವ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ 6.1ರ ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕ್ಟಿಕಾ ಪ್ರಾಂತ್ಯದಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿವೆ. ಈ ಭಾಗದಲ್ಲಿ ಕನಿಷ್ಠ 280 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ತಾಲಿಬಾನ್ ಆಡಳಿತದಲ್ಲಿನ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಸೀಮ್ ಹಕ್ಕಾನಿ ತಿಳಿಸಿದ್ದಾರೆ. ಸಾವಿನ ಸಂಖ್ಯೆ 250ಕ್ಕೂ ಹೆಚ್ಚಿದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಬಿಬಿಸಿ ವರದಿ ಮಾಡಿದೆ.

ಪೂರ್ವದ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್‌ಗಳಲ್ಲಿ ಕೂಡ ಅಪಾರ ಪ್ರಮಾಣದ ಸಾವು ನೋವುಗಳು ವರದಿಯಾಗಿವೆ. ಆಗ್ನೇಯ ಭಾಗದ ನಗರ ಖೋಸ್ಟ್‌ನಿಂದ ಸುಮಾರು 44 ಕಿಮೀ ದೂರದಲ್ಲಿ ಹಾಗೂ 51 ಕಿಮೀ ಆಳದಲ್ಲಿ ಭೂಕಂಪನ ಉಂಟಾಗಿದೆ. ಖೋಸ್ಟ್‌ನಲ್ಲಿ ಕನಿಷ್ಠ 25 ಮಂದಿ ಬಲಿಯಾಗಿದ್ದಾರೆ. ನಂಗರ್ಹಾರ್ ಪ್ರಾಂತ್ಯದಲ್ಲಿ ಕೂಡ ಐವರು ಮೃತಪಟ್ಟಿರುವುದು ವರದಿಯಾಗಿದೆ. ಅಪಾರ ಪ್ರಮಾಣದ ಕಟ್ಟಡಗಳು ಧರೆಗುರುಳಿವೆ.

ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಭಾರತದ ಭಾಗಗಳವರೆಗೆ ಸುಮಾರು 500 ಕಿಮೀ ಉದ್ದಕ್ಕೂ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ಗಳಲ್ಲಿ ಕೂಡ ಭೂಮಿ ನಡುಗಿದ ಅನುಭವವಾಗಿದೆ. ಪಾಕಿಸ್ತಾನದಲ್ಲಿ ಕೂಡ ತೀವ್ರತೆ ಜೋರಾಗಿತ್ತು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

2 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

6 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago