ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭಾರೀ ಹಿಮಪಾತದಿಂದಾಗಿ 42 ಮಂದಿ ದುರ್ಮರಣಕ್ಕೀಡಾಗಿದ್ದು, 76 ಮಂದಿ ಗಾಯಗೊಂಡಿದ್ದಾರೆ.
ಇಸ್ಲಾಮಿಕ್ ಎಮಿರೇಟ್ ಆಫ್ ಆಫ್ಘಾನಿಸ್ತಾನದ (ಐಇಎ) ವಿಪತ್ತು ನಿರ್ವಹಣಾ ವ್ಯವಹಾರಗಳ ರಾಜ್ಯ ಸಚಿವಾಲಯವು, ಕಳೆದ 20 ದಿನಗಳಿಂದ ಹಿಮಪಾತದ ತೀವ್ರತೆಯಿಂದಾಗಿ 2,000 ಮನೆಗಳು ನಾಶವಾಗಿವೆ. ಹಿಮಪಾತದಿಂದಾಗಿ 42 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದೆ.
ಭಾರೀ ಹಿಮಪಾತದಿಂದಾಗಿ ನೂರಾರು ಜನರು ಹಲವು ಹೆದ್ದಾರಿಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲದೇ ಹೆಚ್ಚಿನ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದೆ.
ವಿವಿಧ ಏಜೆನ್ಸಿಗಳು ಕೂಡ ಸಂತ್ರಸ್ತರ ನೆರವಿಗೆ ಧಾವಿಸಿವೆ. ಹಿಮಪಾತಕ್ಕೂ ಮೊದಲು ಪಶ್ಚಿಮ ಬದ್ಘಿಸ್ ಪ್ರಾಂತ್ಯದಲ್ಲಿ ಸಂಭವಿಸಿದ ಎರಡು ಭೂಕಂಪಗಳಲ್ಲಿ 28 ಮಂದಿ ಮೃತಪಟ್ಟಿದ್ದರು. ಆಗ 1 ಸಾವಿರ ಮನೆಗಳು ನಾಶವಾಗಿದ್ದವು ಎಂದು ಹೇಳಿದೆ.
ತಾಲಿಬಾನ್ ಆಡಳಿತದಿಂದಾಗಿ ನಿರುದ್ಯೋಗ, ಹಸಿವು, ಬರದಿಂದ ತತ್ತರಿಸಿರುವ ಅಫ್ಘಾನಿಸ್ತಾನದ ಜನತೆಗೆ ಹಿಮಪಾತವು ಮತ್ತೊಂದು ಹೊಡೆತ ನೀಡಿದೆ.
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…