Featured

ಅಫ್ಘಾನಿಸ್ತಾನದಲ್ಲಿ ಭಾರೀ ಹಿಮಪಾತ : 42 ಮಂದಿ ಸಾವು – Vishwanews24

ಅಫ್ಘಾನಿಸ್ತಾನದಲ್ಲಿ ಭಾರೀ ಹಿಮಪಾತ : 42 ಮಂದಿ ಸಾವು – Vishwanews24

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭಾರೀ ಹಿಮಪಾತದಿಂದಾಗಿ 42 ಮಂದಿ ದುರ್ಮರಣಕ್ಕೀಡಾಗಿದ್ದು, 76 ಮಂದಿ ಗಾಯಗೊಂಡಿದ್ದಾರೆ.

ಇಸ್ಲಾಮಿಕ್‌ ಎಮಿರೇಟ್‌ ಆಫ್‌ ಆಫ್ಘಾನಿಸ್ತಾನದ (ಐಇಎ) ವಿಪತ್ತು ನಿರ್ವಹಣಾ ವ್ಯವಹಾರಗಳ ರಾಜ್ಯ ಸಚಿವಾಲಯವು, ಕಳೆದ 20 ದಿನಗಳಿಂದ ಹಿಮಪಾತದ ತೀವ್ರತೆಯಿಂದಾಗಿ 2,000 ಮನೆಗಳು ನಾಶವಾಗಿವೆ. ಹಿಮಪಾತದಿಂದಾಗಿ 42 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದೆ.

ಭಾರೀ ಹಿಮಪಾತದಿಂದಾಗಿ ನೂರಾರು ಜನರು ಹಲವು ಹೆದ್ದಾರಿಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲದೇ ಹೆಚ್ಚಿನ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದೆ.

ವಿವಿಧ ಏಜೆನ್ಸಿಗಳು ಕೂಡ ಸಂತ್ರಸ್ತರ ನೆರವಿಗೆ ಧಾವಿಸಿವೆ. ಹಿಮಪಾತಕ್ಕೂ ಮೊದಲು ಪಶ್ಚಿಮ ಬದ್ಘಿಸ್‌ ಪ್ರಾಂತ್ಯದಲ್ಲಿ ಸಂಭವಿಸಿದ ಎರಡು ಭೂಕಂಪಗಳಲ್ಲಿ 28 ಮಂದಿ ಮೃತಪಟ್ಟಿದ್ದರು. ಆಗ 1 ಸಾವಿರ ಮನೆಗಳು ನಾಶವಾಗಿದ್ದವು ಎಂದು ಹೇಳಿದೆ.

ತಾಲಿಬಾನ್‌ ಆಡಳಿತದಿಂದಾಗಿ ನಿರುದ್ಯೋಗ, ಹಸಿವು, ಬರದಿಂದ ತತ್ತರಿಸಿರುವ ಅಫ್ಘಾನಿಸ್ತಾನದ ಜನತೆಗೆ ಹಿಮಪಾತವು ಮತ್ತೊಂದು ಹೊಡೆತ ನೀಡಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago