Featured

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ – vishwanews24

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಸಾವು : ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ

ಕಾಬೂಲ್ : ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೆ ಸುಮಾರು 800 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಫ್ಘಾನಿಸ್ತಾನದ ನೆರವಿಗೆ ನಿಂತಿದ್ದು, 15 ಟನ್ ಆಹಾರ ಸಾಮಾಗ್ರಿಗಳನ್ನು ರವಾನೆ ಮಾಡಿದೆ.

ಭೂಕಂಪದಿಂದಾಗಿ ಮನೆಗಳು ನೆಲಸಮವಾಗಿದ್ದು, ಅವಶೇಷಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದ ತೀವ್ರತೆಗೆ ಸುಮಾರು 2,500 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸುತ್ತಿದ್ದಂತೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅಫ್ಘಾನ್ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಇನ್ನು ಘಟನೆಯಲ್ಲಿ ಸಾವನ್ನಪ್ಪಿದ ನಾಗರಿಕರಿಗೆ ಸಂತಾಪ ಸೂಚಿಸಿದ್ದಾರೆ.

“ಅಫ್ಘಾನಿಸ್ತಾನದ ಸಂಕಷ್ಟದ ಸಮಯದಲ್ಲಿ ಅವರಿಗೆ ಸಹಾಯ ಮಾಡಲು, ಭಾರತವು ಡೇರೆಗಳು ಮತ್ತು ಆಹಾರ ಸಾಮಗ್ರಿಗಳನ್ನು ದೇಶಕ್ಕೆ ರವಾನಿಸಿದೆ. ಮುಂದಿನ ದಿನಗಳಲ್ಲಿ ಅಫ್ಘಾನಿಸ್ತಾನಕ್ಕೆ ಹೆಚ್ಚಿನ ನೆರವು ನೀಡಲಾಗುವುದು. ಭಾರತ ಇಂದು ಕಾಬೂಲ್‌ನಲ್ಲಿ 1000 ಕುಟುಂಬ ಡೇರೆಗಳನ್ನು ತಲುಪಿಸಿದೆ. ಭಾರತೀಯ ಮಿಷನ್ 15 ಟನ್ ಆಹಾರ ಸಾಮಗ್ರಿಗಳನ್ನು ತಕ್ಷಣವೇ ಕಾಬೂಲ್‌ನಿಂದ ಕುನಾರ್‌ಗೆ ಸಾಗಿಸುತ್ತಿದೆ” ಎಂದು ಜೈಶಂಕರ್ ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪಾಕಿಸ್ತಾನದ ಗಡಿಯಲ್ಲಿರುವ ಕುನಾರ್ ಪ್ರಾಂತ್ಯದಲ್ಲಿ ಮಾತ್ರ ಸುಮಾರು 800 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಹತ್ತಿರದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ವರದಿ ಪ್ರಕಾರ, ಸ್ಥಳೀಯ ಸಮಯ ರಾತ್ರಿ 11:47 ಕ್ಕೆ 8 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ನಂಗರ್‌ಹಾರ್ ಪ್ರಾಂತ್ಯದ ಜಲಾಲಾಬಾದ್‌ನಿಂದ ಪೂರ್ವ-ಈಶಾನ್ಯಕ್ಕೆ 27 ಕಿ.ಮೀ ದೂರದಲ್ಲಿದೆ.

ಕುನಾರ್ ಪ್ರಾಂತ್ಯದಲ್ಲಿ ನೂರ್ ಗುಲ್, ಸೋಕಿ, ವಾಟ್ಪುರ್, ಮನೋಗಿ ಮತ್ತು ಚಾಪಾ ದಾರಾ ಪ್ರದೇಶಗಳು ಅತಿ ಹೆಚ್ಚು ಹಾನಿಗೊಳಗಾಗಿವೆ. ದುರ್ಬಲವಾದ ಮಣ್ಣು ಮತ್ತು ಕಲ್ಲಿನಿಂದ ನಿರ್ಮಿಸಲಾದ ಇಡೀ ಹಳ್ಳಿಗಳು ಭೂಕಂಪದಿಂದಾಗಿ ಕುಸಿದಿವೆ. ಭೂಕುಸಿತಗಳು ಪ್ರಮುಖ ಮಾರ್ಗಗಳನ್ನು ಮುಚ್ಚಿಹಾಕಿವೆ. ಇದರಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago