ದುಬೈ :ಅಬುಧಾಬಿಯಲ್ಲಿ ನೆಲೆಸಿರುವ ಭಾರತೀಯರಿಗೆ ಅಲ್ಲಿನ ನ್ಯಾಯಾಂಗ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿರುವ ಕಾರಣ ಅವರಿಗೆ ನೆಲದ ಕಾನೂನು ಅರ್ಥವಾಗಲಿ ಎಂಬ ಕಾರಣಕ್ಕೆ ನ್ಯಾಯಾಲಯಗಳಲ್ಲಿ ಹಿಂದಿಯನ್ನು ತೃತೀಯ ಭಾಷೆಯಾಗಿ ಸೇರ್ಪಡೆ ಮಾಡಲಾಗಿದೆ.
ಅರೇಬಿಕ್ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಅಬುಧಾಬಿಯ ನ್ಯಾಯಾಂಗ ಈವರೆಗೆ ಕಾರ್ಯ ನಿರ್ವಹಿಸುತ್ತಿದ್ದು, ಇನ್ನು ಮುಂದೆ ಅದರ ಜೊತೆಗೆ ಹಿಂದಿಯೂ ತೃತೀಯ ಭಾಷೆಯಾಗಿ ಸೇರ್ಪಡೆಗೊಂಡಿದೆ. ಇಂತಹ ಒಂದು ಮಹತ್ವದ ತೀರ್ಮಾನ ಕೈಗೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ನೆಲೆಸಿರುವುದೇ ಕಾರಣ ಎಂದು ಹೇಳಲಾಗಿದೆ.
ಅಬುಧಾಬಿಯ ನ್ಯಾಯಾಂಗ ಇಲಾಖೆ ಶನಿವಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ. ನ್ಯಾಯಾಲಯಕ್ಕೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಹಾಗೂ ಇತರ ಕಾನೂನು ಪರಿಕರಗಳು ಇನ್ನು ಮುಂದೆ ಹಿಂದಿಯಲ್ಲಿ ಸಿಗಲಿವೆ. ನ್ಯಾಯಾಂಗ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮ ಕೈಗೊಳ್ಳಲಾಗಿದೆ
ಯುನೈಟೆಡ್ ಅರಬ್ ಎಮಿರೇಟ್ಸ್ ನ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ 30 ರಷ್ಟು ಮಂದಿ ಭಾರತೀಯರು ವಿವಿಧ ಉದ್ಯೋಗಗಳಲ್ಲಿ ತೊಡಗಿಕೊಂಡಿದ್ದಾರೆ. ವ್ಯಾಜ್ಯಗಳು ತಲೆದೋರಿದ ಸಂದರ್ಭದಲ್ಲಿ ನೆಲದ ಕಾನೂನನ್ನು ಅರಿಯಲು ಇವರಿಗೆ ಸಹಾಯಕವಾಗಲಿ ಎಂಬ ಕಾರಣಕ್ಕೆ ಹಿಂದಿ ಭಾಷೆಯನ್ನು ನ್ಯಾಯಾಲಯಗಳಲ್ಲಿ ಮೂರನೇ ಅಧಿಕೃತ ಭಾಷೆಯನ್ನಾಗಿ ಸೇರ್ಪಡೆ ಮಾಡಲಾಗಿದೆ.
ಅಬುದಾಬಿ ನ್ಯಾಯಾಲಯದಲ್ಲಿ ಹಿಂದಿಯನ್ನು ಅಧಿಕೃತ ತೃತೀಯ ಭಾಷೆಯಾಗಿ ಸೇರ್ಪಡೆ ಮಾಡುವ ಮೂಲಕ ಅಲ್ಲಿನ ನ್ಯಾಯಾಂಗ ಇಲಾಖೆ ಮಹತ್ವ ನಿರ್ಧಾರ ಕೈಗೊಂಡಿದೆ..
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…