Featured

ಅಬುಧಾಬಿಯಲ್ಲಿ 20 ಮಿಲಿಯನ್ ದಿರಮ್ ಲಾಟರಿ ಗೆದ್ದ ಉಡುಪಿ ಮೂಲದ ವ್ಯಕ್ತಿ – vishwanews24

ಅಬುಧಾಬಿಯಲ್ಲಿ 20 ಮಿಲಿಯನ್ ದಿರಮ್ ಲಾಟರಿ ಗೆದ್ದ ಉಡುಪಿ ಮೂಲದ ವ್ಯಕ್ತಿ

ಅಬುಧಾಬಿ : ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು 20 ಮಿಲಿಯನ್ ದಿರಮ್ (ಸುಮಾರು 45 ಕೋಟಿ ರೂಪಾಯಿಗೂ ಅಧಿಕ) ಮೊತ್ತದ ಬೃಹತ್ ಬಹುಮಾನವನ್ನು ಗೆದ್ದು ಕೋಟ್ಯಧಿಪತಿಯಾಗಿದ್ದಾರೆ.

ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಅನಿವಾಸಿ ಭಾರತೀಯ ಶಂತನು ಶೆಟ್ಟಿಗಾರ್ ಈ ಲಾಟರಿ ಗೆದ್ದಿದ್ದಾರೆ. ಪ್ರಸ್ತುತ ಓಮನ್‌ನ ರಿಟೇಲ್ ವಲಯದಲ್ಲಿ ಕೆಲಸ ಮಾಡುತ್ತಿರುವ ಇವರು ಖರೀದಿಸಿದ್ದ 305810 ಸಂಖ್ಯೆಯ ಟಿಕೆಟ್‌ಗೆ ‘ಸರಣಿ 283’ರ ಈ ಬೃಹತ್ ಮೊತ್ತ ಒಲಿದಿದೆ. ಇದು ಯುಎಇಯ ದೀರ್ಘಕಾಲದ ರಾಫೆಲ್ ಡ್ರಾಗಳಲ್ಲಿ ಒಂದಾದ ಬಿಗ್ ಟಿಕೆಟ್ ಇತಿಹಾಸದಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲಾಗಿದೆ.

ಇದನ್ನೂ ಓದಿ 👇👇

ವಿಶ್ವದಾದ್ಯಂತ ಕುತೂಹಲ ಕೆರಳಿಸಿದ್ದ ಈ ಲೈವ್ ಡ್ರಾವನ್ನು ಸಾವಿರಾರು ಜನರು ವೀಕ್ಷಿಸುತ್ತಿದ್ದರು. ಬಹುಮಾನ ಗೆದ್ದ ಸುದ್ದಿ ತಿಳಿಯುತ್ತಿದ್ದಂತೆ ಸಂಘಟಕರೊಂದಿಗೆ ಮಾತನಾಡಿದ ಶಂತನು ಶೆಟ್ಟಿಗಾರ್, “ಈ ಗೆಲುವಿನಿಂದ ಅತೀವ ಸಂತೋಷವಾಗಿದೆ. ಆದರೆ ಈ ಹಣವನ್ನು ಏನು ಮಾಡಬೇಕೆಂದು ಇನ್ನೂ ನಿರ್ಧರಿಸಿಲ್ಲ” ಎಂದು ತಿಳಿಸಿದರು.

ಅಲ್ಲದೆ, ಈ ಟಿಕೆಟ್ ಅನ್ನು ತಾವು ಒಬ್ಬರೇ ಖರೀದಿಸಿದ್ದಲ್ಲದೆ, ಸ್ನೇಹಿತನೊಬ್ಬನ ಜೊತೆಗೂಡಿ ಖರೀದಿಸಿದ್ದಾಗಿ ಅವರು ತಿಳಿಸಿದ್ದಾರೆ. ನಿಯಮದಂತೆ ಬಹುಮಾನದ ಮೊತ್ತವನ್ನು ಇಬ್ಬರೂ ಹಂಚಿಕೊಳ್ಳಲಿದ್ದಾರೆ. ಶಂತನು ಶೆಟ್ಟಿಗಾರ್ ಅವರು ಈ ಬೃಹತ್ ಮೊತ್ತದ ಮೂಲಕ ರಾತ್ರೋರಾತ್ರಿ ಬಿಗ್ ಟಿಕೆಟ್ ಇತಿಹಾಸದ ಹೊಸ ಮಿಲಿಯನೇರ್ ಆಗಿ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ 👇👇

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago