ಅಬುಧಾಬಿ : ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು 20 ಮಿಲಿಯನ್ ದಿರಮ್ (ಸುಮಾರು 45 ಕೋಟಿ ರೂಪಾಯಿಗೂ ಅಧಿಕ) ಮೊತ್ತದ ಬೃಹತ್ ಬಹುಮಾನವನ್ನು ಗೆದ್ದು ಕೋಟ್ಯಧಿಪತಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಅನಿವಾಸಿ ಭಾರತೀಯ ಶಂತನು ಶೆಟ್ಟಿಗಾರ್ ಈ ಲಾಟರಿ ಗೆದ್ದಿದ್ದಾರೆ. ಪ್ರಸ್ತುತ ಓಮನ್‌ನ ರಿಟೇಲ್ ವಲಯದಲ್ಲಿ ಕೆಲಸ ಮಾಡುತ್ತಿರುವ ಇವರು ಖರೀದಿಸಿದ್ದ 305810 ಸಂಖ್ಯೆಯ ಟಿಕೆಟ್‌ಗೆ ‘ಸರಣಿ 283’ರ ಈ ಬೃಹತ್ ಮೊತ್ತ ಒಲಿದಿದೆ. ಇದು ಯುಎಇಯ ದೀರ್ಘಕಾಲದ ರಾಫೆಲ್ ಡ್ರಾಗಳಲ್ಲಿ ಒಂದಾದ ಬಿಗ್ ಟಿಕೆಟ್ ಇತಿಹಾಸದಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲಾಗಿದೆ.
ಇದನ್ನೂ ಓದಿ 👇👇
ವಿಶ್ವದಾದ್ಯಂತ ಕುತೂಹಲ ಕೆರಳಿಸಿದ್ದ ಈ ಲೈವ್ ಡ್ರಾವನ್ನು ಸಾವಿರಾರು ಜನರು ವೀಕ್ಷಿಸುತ್ತಿದ್ದರು. ಬಹುಮಾನ ಗೆದ್ದ ಸುದ್ದಿ ತಿಳಿಯುತ್ತಿದ್ದಂತೆ ಸಂಘಟಕರೊಂದಿಗೆ ಮಾತನಾಡಿದ ಶಂತನು ಶೆಟ್ಟಿಗಾರ್, “ಈ ಗೆಲುವಿನಿಂದ ಅತೀವ ಸಂತೋಷವಾಗಿದೆ. ಆದರೆ ಈ ಹಣವನ್ನು ಏನು ಮಾಡಬೇಕೆಂದು ಇನ್ನೂ ನಿರ್ಧರಿಸಿಲ್ಲ” ಎಂದು ತಿಳಿಸಿದರು.
ಅಲ್ಲದೆ, ಈ ಟಿಕೆಟ್ ಅನ್ನು ತಾವು ಒಬ್ಬರೇ ಖರೀದಿಸಿದ್ದಲ್ಲದೆ, ಸ್ನೇಹಿತನೊಬ್ಬನ ಜೊತೆಗೂಡಿ ಖರೀದಿಸಿದ್ದಾಗಿ ಅವರು ತಿಳಿಸಿದ್ದಾರೆ. ನಿಯಮದಂತೆ ಬಹುಮಾನದ ಮೊತ್ತವನ್ನು ಇಬ್ಬರೂ ಹಂಚಿಕೊಳ್ಳಲಿದ್ದಾರೆ. ಶಂತನು ಶೆಟ್ಟಿಗಾರ್ ಅವರು ಈ ಬೃಹತ್ ಮೊತ್ತದ ಮೂಲಕ ರಾತ್ರೋರಾತ್ರಿ ಬಿಗ್ ಟಿಕೆಟ್ ಇತಿಹಾಸದ ಹೊಸ ಮಿಲಿಯನೇರ್ ಆಗಿ ಹೊರಹೊಮ್ಮಿದ್ದಾರೆ.
ಇದನ್ನೂ ಓದಿ 👇👇
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…