Featured

ಅಬುಧಾಬಿ ಹಿಂದೂ ದೇವಾಲಯ – ಭಕ್ತರಿಗೆ  ಮಾರ್ಗಸೂಚಿ ಪ್ರಕಟ – Vishwanews24

ಅಬುಧಾಬಿ ಹಿಂದೂ ದೇವಾಲಯ: ಭಕ್ತರಿಗೆ ಡ್ರೆಸ್ ಕೋಡ್ ಕಡ್ಡಾಯ

ಅಬುಧಾಬಿ: ಕಳೆದ ತಿಂಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ  ಅವರು ಉದ್ಘಾಟಿಸಿದ್ದ ಅಬುಧಾಬಿಯ ಬೋಚಾಸನವಾಸಿ ಅಕ್ಷರ ಪುರುಷೋತ್ತಮ ಸಂಸ್ಥಾ  ಮಂದಿರ ಮಾರ್ಚ್‌ 1ರಿಂದ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಯುಎಇಯಲ್ಲಿನ ಹಿಂದು ದೇವಾಲಯ ( ತನ್ನ ವೆಬ್‌ಸೈಟ್‌ನಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಯಾವ ರೀತಿಯ ಬಟ್ಟೆ ಧರಿಸಬೇಕು, ಯಾವೆಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎನ್ನುವುದನ್ನು ತಿಳಿಸಿದೆ.

ಡ್ರೆಸ್‌ಕೋಡ್‌
“ಕುತ್ತಿಗೆ, ಮೊಣಕೈ ಮತ್ತು ಪಾದಗಳ ನಡುವಿನ ದೇಹದ ಭಾಗ ಮುಚ್ಚಿರಬೇಕು. ಆಕ್ರಮಣಕಾರಿ ವಿನ್ಯಾಸಗಳನ್ನು ಹೊಂದಿರುವ ಟೋಪಿಗಳು, ಟೀ ಶರ್ಟ್‌ಗಳು ಮತ್ತು ಇತರ ಬಟ್ಟೆಗಳನ್ನು ಅನುಮತಿಸಲಾಗುವುದಿಲ್ಲ. ಅರೆ ಪಾರದರ್ಶಕ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸಬೇಡಿ. ಗಮನವನ್ನು ಬೇರೆಡೆಗೆ ಸೆಳೆಯುವ ಶಬ್ದಗಳು ಅಥವಾ ಪ್ರತಿಬಿಂಬಗಳನ್ನು ಉಂಟು ಮಾಡುವ ಬಟ್ಟೆ ಮತ್ತು ಪರಿಕರಗಳನ್ನು ತಪ್ಪಿಸಿ” ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಈ ನಿಯಮ ಗೊತ್ತಿರಲಿ
ದೇವಾಲಯದ ಒಳಕ್ಕೆ ಸಾಕು ಪ್ರಾಣಿಗಳಿಗೆ ಪ್ರವೇಶವಿಲ್ಲ. ಹೊರಗಿನ ಆಹಾರ ಮತ್ತು ಪಾನೀಯಗಳನ್ನು ದೇವಸ್ಥಾನದ ಸಂಕೀರ್ಣದ ಒಳಗೆ ತರುವಂತಿಲ್ಲ. ಅಲ್ಲದೆ ಡ್ರೋನ್‌ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆ ಸೂಚಿಸಿದೆ. “ಪ್ರಶಾಂತ ವಾತಾವರಣವನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ಆವರಣದ ಕ್ರಮಬದ್ಧ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಈ ಮಾರ್ಗಸೂಚಿಗಳನ್ನು ಅನುಸರಿಸುವುದು ಅಗತ್ಯʼʼ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬೋಚಾಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ ದುಬೈ– ಅಬುಧಾಬಿ ಶೇಖ್‌ ಜಾಯೆದ್‌ ಹೆದ್ದಾರಿಯ ಅಬು ಮುರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ಈ ಭವ್ಯವಾದ ದೇವಾಲಯವನ್ನು ನಿರ್ಮಾಣ ಮಾಡಿದೆ. ಫೆಬ್ರವರಿ 14ರಂದು ಸುಮಾರು 5,000 ಮಂದಿಯ ಉಪಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ದೇಗುಲವನ್ನು ಉದ್ಘಾಟಿಸಿದ್ದರು. ಮಾರ್ಚ್‌ 1ರಿಂದ ಪ್ರವಾಸಿಗರ ಭೇಟಿಗೆ ಮಂದಿರ ಮುಕ್ತವಾಗಿದ್ದು, ಬೆಳಗ್ಗೆ 8 ಗಂಟೆಯಿಂದ ರಾತ್ರಿ 8ರವರೆಗೆ ದೇವಾಲಯವ ತೆರೆದಿರಲಿದೆ. ಪ್ರತಿ ಸೋಮವಾರ ಮಂದಿರ ಮುಚ್ಚಿರಲಿದೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago