ಅಬುಧಾಬಿ: ಕಳೆದ ತಿಂಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ ಅಬುಧಾಬಿಯ ಬೋಚಾಸನವಾಸಿ ಅಕ್ಷರ ಪುರುಷೋತ್ತಮ ಸಂಸ್ಥಾ ಮಂದಿರ ಮಾರ್ಚ್ 1ರಿಂದ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಯುಎಇಯಲ್ಲಿನ ಹಿಂದು ದೇವಾಲಯ ( ತನ್ನ ವೆಬ್‌ಸೈಟ್‌ನಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಯಾವ ರೀತಿಯ ಬಟ್ಟೆ ಧರಿಸಬೇಕು, ಯಾವೆಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎನ್ನುವುದನ್ನು ತಿಳಿಸಿದೆ.
ಡ್ರೆಸ್‌ಕೋಡ್
“ಕುತ್ತಿಗೆ, ಮೊಣಕೈ ಮತ್ತು ಪಾದಗಳ ನಡುವಿನ ದೇಹದ ಭಾಗ ಮುಚ್ಚಿರಬೇಕು. ಆಕ್ರಮಣಕಾರಿ ವಿನ್ಯಾಸಗಳನ್ನು ಹೊಂದಿರುವ ಟೋಪಿಗಳು, ಟೀ ಶರ್ಟ್‌ಗಳು ಮತ್ತು ಇತರ ಬಟ್ಟೆಗಳನ್ನು ಅನುಮತಿಸಲಾಗುವುದಿಲ್ಲ. ಅರೆ ಪಾರದರ್ಶಕ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸಬೇಡಿ. ಗಮನವನ್ನು ಬೇರೆಡೆಗೆ ಸೆಳೆಯುವ ಶಬ್ದಗಳು ಅಥವಾ ಪ್ರತಿಬಿಂಬಗಳನ್ನು ಉಂಟು ಮಾಡುವ ಬಟ್ಟೆ ಮತ್ತು ಪರಿಕರಗಳನ್ನು ತಪ್ಪಿಸಿ” ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಈ ನಿಯಮ ಗೊತ್ತಿರಲಿ
ದೇವಾಲಯದ ಒಳಕ್ಕೆ ಸಾಕು ಪ್ರಾಣಿಗಳಿಗೆ ಪ್ರವೇಶವಿಲ್ಲ. ಹೊರಗಿನ ಆಹಾರ ಮತ್ತು ಪಾನೀಯಗಳನ್ನು ದೇವಸ್ಥಾನದ ಸಂಕೀರ್ಣದ ಒಳಗೆ ತರುವಂತಿಲ್ಲ. ಅಲ್ಲದೆ ಡ್ರೋನ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆ ಸೂಚಿಸಿದೆ. “ಪ್ರಶಾಂತ ವಾತಾವರಣವನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ಆವರಣದ ಕ್ರಮಬದ್ಧ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಈ ಮಾರ್ಗಸೂಚಿಗಳನ್ನು ಅನುಸರಿಸುವುದು ಅಗತ್ಯʼʼ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಬೋಚಾಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ ದುಬೈ– ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಬು ಮುರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ಈ ಭವ್ಯವಾದ ದೇವಾಲಯವನ್ನು ನಿರ್ಮಾಣ ಮಾಡಿದೆ. ಫೆಬ್ರವರಿ 14ರಂದು ಸುಮಾರು 5,000 ಮಂದಿಯ ಉಪಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ದೇಗುಲವನ್ನು ಉದ್ಘಾಟಿಸಿದ್ದರು. ಮಾರ್ಚ್ 1ರಿಂದ ಪ್ರವಾಸಿಗರ ಭೇಟಿಗೆ ಮಂದಿರ ಮುಕ್ತವಾಗಿದ್ದು, ಬೆಳಗ್ಗೆ 8 ಗಂಟೆಯಿಂದ ರಾತ್ರಿ 8ರವರೆಗೆ ದೇವಾಲಯವ ತೆರೆದಿರಲಿದೆ. ಪ್ರತಿ ಸೋಮವಾರ ಮಂದಿರ ಮುಚ್ಚಿರಲಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…