ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಜೀ ತಮಿಳು ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಭಾಗವಹಿಸಿದ್ದರು. ಈ ವೇಳೆ ಅವರಿಗೆ ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸದ್ಯ ಸುದೀಪ್ ಅವರಿಗೆ ಈ ಪ್ರಶಸ್ತಿ ಸಿಕ್ಕಿದ್ದು, ಇದರಿಂದ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ.
ಸಾಮಾನ್ಯವಾಗಿ ಸುದೀಪ್ ಪ್ರಶಸ್ತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ. ಆದರೆ ಈಗ ಅವರು ತಮಿಳಿನ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಅವರ ಅಭಿಮಾನಿಗಳಿಗೆ ಶಾಕ್ ಜೊತೆ ಖುಷಿ ಕೂಡ ಆಗಿದೆ. ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದೀಪ್ ತಮ್ಮ ಅನುಭವವನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡರು.
ಜೀ ತಮಿಳು ವಾಹಿನಿಯ ‘ಜೀ ಸಿನಿ ಅವಾರ್ಡ್ಸ್ 2020’ ಯಲ್ಲಿ ‘ಕನ್ನಡ ಚಿತ್ರರಂಗದ ಹೆಮ್ಮೆ’ ಎಂಬ ಪ್ರಶಸ್ತಿಯನ್ನು ಸುದೀಪ್ ಪಡೆದಿದ್ದರೆ, ‘ಭಾರತೀಯ ಚಿತ್ರರಂಗದ ಹೆಮ್ಮೆ’ ಎಂಬ ಪ್ರಶಸ್ತಿಯನ್ನು ಕಮಲ್ ಹಾಸನ್ ಸ್ವೀಕರಿಸಿದ್ದಾರೆ. 2019ನೇ ಸಾಲಿನ ತಮಿಳು ಚಿತ್ರರಂಗದ ಅತ್ಯುತ್ತಮ ಕಲಾವಿದರು, ತಂತ್ರಜ್ಞರಿಗೆ ಇದೇ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ಬೋನಿ ಕಪೂರ್, ಧನುಷ್, ಕಮಲ್ ಹಾಸನ್, ನಯನತಾರಾ, ಸುಹಾಸಿನಿ, ನಿವಿನ್ ಪೌಲ್, ಶ್ರೇಯಾ ಘೋಷಾಲ್, ವಿಜಯ್ ಸೇತುಪತಿ, ಸಮಂತಾ ಅಕ್ಕಿನೇನಿ ಸೇರಿದಂತೆ ಹಲವು ಕಲಾವಿದರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ನಟರಾದ ವಿಜಯ್ ಸೇತುಪತಿ, ಧನುಷ್ ಹಾಗೂ ನಟಿ ನಯನತಾರಾ ಕೂಡ ಪ್ರಶಸ್ತಿಯನ್ನು ಪಡೆದರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…