ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಜಯಂತಿ ಅವರು ಇಂದು ಕೊನೆಯುಸಿರೆಳೆದಿದ್ದು, ಅಭಿನಯ ಶಾರದೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಬಸವರಾಜ ಬೊಮ್ಮಾಯಿ, ಬಿ.ಸಿ ಪಾಟೀಲ್, ನಟ ಜಗ್ಗೇಶ್, ನಿರ್ದೇಶಕ ಪವನ್ ಒಡೆಯರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, “ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ಮತ್ತು ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖವಾಗಿದೆ. ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕಲಾರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…