Featured

ಅಭಿಮತ ‘ಕೀರ್ತಿ ಕಲಶ’ ಮಹಾ ಗೌರವಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ ದಯಾ ನಾಯಕ್ ಆಯ್ಕೆ – vishwanews24

ಅಭಿಮತ ‘ಕೀರ್ತಿ ಕಲಶ’ ಮಹಾ ಗೌರವಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ ದಯಾ ನಾಯಕ್ ಆಯ್ಕೆ

ಬ್ರಹ್ಮಾವರ: ಗಿಳಿಯಾರು ಜನಸೇವಾ ಟ್ರಸ್ಟ್ ಕಳೆದ ಹಲವು ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಸಮಾಜ ಗುರುತಿಸಿ ನೀಡುವ ‘ಕೀರ್ತಿ ಕಲಶ’ ಮಹಾ ಗೌರವವನ್ನು ಈ ಬಾರಿ ಮಹಾರಾಷ್ಟ್ರದ ನಿವೃತ್ತ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರಿಗೆ ಪ್ರದಾನಿಸಲಾಗುತ್ತಿದೆ ಎಂದು ಟ್ರಸ್ಟ್‌ನ ಪ್ರವರ್ತಕ ವಸಂತ್ ಗಿಳಿಯಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ವೃತ್ತಿಪರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಮೂವರು ಸಾಧಕರಿಗೆ ಪ್ರತಿವರ್ಷ ನೀಡಲಾಗುವ ‘ಯಶೋಗಾಥೆ’ ಪುರಸ್ಕಾರವನ್ನು ಈ ಬಾರಿ ಹಿರಿಯ ತುಳು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಕಳೆದ 25 ವರ್ಷಗಳಿಂದ ನಿರಂತರವಾಗಿ ಕಲಾಸೇವೆ ಸಲ್ಲಿಸುತ್ತಿರುವ ಯಶಸ್ವಿ ಕಲಾವೃಂದ ಹಾಗೂ ಸಾವಿರಾರು ಮಕ್ಕಳಿಗೆ ಜೀವ ನೀಡಿದ ಬಸ್ರೂರಿನ ಹಿರಿಯ ಸೂಲಗಿತ್ತಿ ಲಕ್ಷ್ಮಿ ಪೂಜಾರಿ ಗುಂಡಿಗೋಳಿ ಅವರಿಗೆ ನೀಡಲಾಗುತ್ತದೆ.

ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ಫೆಬ್ರವರಿ 14ರಂದು ಸಂಜೆ 6 ಗಂಟೆಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಾರ್ಷಿಕ ಉತ್ಸವ ‘ಅಭಿಮತ ಸಂಭ್ರಮ 2026’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಗೌರವಪೂರ್ವಕವಾಗಿ ಪ್ರಶಸ್ತಿಗಳನ್ನು ಪ್ರದಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಮಾಜಸೇವೆಯ ಮೂಲಕ ಜನಮನ ಗೆದ್ದ ಸಾಧಕರನ್ನು ಗೌರವಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಟ್ರಸ್ಟ್ ಮನವಿ ಮಾಡಿದೆ.

Vishwa News 24

Recent Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

20 seconds ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

9 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

16 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

39 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

45 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

55 minutes ago