Featured

ಅಭಿವೃದ್ಧಿಯಲ್ಲಿ ಕುಂಟುತ್ತಾ ಮಲಗಿದ್ದ ರಾಜ್ಯ ಸರಕಾರ ಇದೀಗ ಓಡಲು ಆರಂಭಿಸಿದೆ : ನಳಿನ್ ಕುಮಾರ್ ಕಟೀಲು -Vishwanews24

ಮಂಗಳೂರು: ಕಳೆದ ಒಂದೂವರೆ ವರ್ಷಗಳಲ್ಲಿ ಅಭಿವೃದ್ಧಿಯಲ್ಲಿ ಕುಂಟುತ್ತಾ ಮಲಗಿದ್ದ ರಾಜ್ಯ ಸರಕಾರ ಇದೀಗ ಓಡಲು ಆರಂಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಯಡಿಯೂರಪ್ಪ ನೇತೃತ್ವದ ರಾಜ್ಯದ ಬಿಜೆಪಿ ಸರಕಾರ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ‘ನೂರು ದಿನ ನೂರು ಸಾಧನೆ’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಹಲವು ಸವಾಲುಗಳ ಮಧ್ಯೆಯೇ ನೆರೆ ಹಾಗೂ ಬರ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಸಮರ್ಥವಾಗಿ ಎದುರಿಸಿದೆ. 22 ಜಿಲ್ಲೆಗಳ 103 ತಾಲೂಕುಗಳು ಈ ಬಾರಿ ಪ್ರವಾಹ ಪೀಡಿತವಾಗಿದ್ದು, ಮಧ್ಯಂತರ ಪರಿಹಾರವಾಗಿ ಕೇಂದ್ರ ಸರಕಾರ 1200 ಕೋಟಿ ರೂ.ಗಳನ್ನು ನೀಡಿದೆ. ರಾಜ್ಯ ಸರಕಾರ ತಕ್ಷಣ ಸ್ಪಂದನೆ ನೀಡಿ ಸಂತ್ರಸ್ತರಿಗೆ ನೇರವಾಗಿ ಅವರ ಖಾತೆಗೆ ಪರಿಹಾರ ಹಣ ಒದಗಿಸುವಂತೆ ಮಾಡಿದೆ. ಮಾತ್ರವಲ್ಲದೆ, ಮನೆ ಕಳೆದುಕೊಂಡವರಿಗೆ ಮನೆ, ಜಾಗದ ವ್ಯವಸ್ಥೆ ಹಾಗೂ ತಾತ್ಕಾಲಿಕ ಬಾಡಿಗೆ ಮನೆ ಬಾಡಿಗೆ ಹಣದ ವ್ಯವಸ್ಥೆಯನ್ನೂ ಮಾಡಿದೆ ಎಂದವರು ಹೇಳಿದರು.

ಮಂಗಳೂರು ನಗರದಲ್ಲಿ ಕಾಂಕ್ರಿಟೀಕರಣ ಆಗಿದ್ದು ಈ ಹಿಂದೆ ಯಡಿಯೂರಪ್ಪ ನೇತೃತ್ವದ ಸರಕಾರದ ಅನುದಾನದಿಂದ. ನಗರ ಸುಂದರ ಆಗಿದ್ದರೆ ಅದಕ್ಕೆ ಯಡಿಯೂರಪ್ಪ ಕಾರಣ. ಅವರ ಅವಧಿಯಲ್ಲಿ ಅತಿ ಹೆಚ್ಚು ಅನುದಾನ ನಗರಕ್ಕೆ ದೊರಕಿದೆ. ಕಮಿಷನರೇಟ್ ಕಚೇರಿ, ಮಿನಿ ವಿಧಾನಸೌಧ, ಲೇಡಿಗೋಶನ್ ಆಸ್ಪತ್ರೆ ಮೇಲ್ದರ್ಜೆಗೆ ಮೊದಲಾದ ಕಾಮಗಾರಿಗಳು ಆ ಅವಧಿಯಲ್ಲಿ ನಡೆದಿರುವಂತದ್ದು. ಪ್ರಧಾನಿ ನರೇಂದ್ರ ಮೋದಿ ಹಾಗೂ ಈಗಿನ ಉಪರಾಷ್ಟ್ರಪತಿಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗ ಸ್ಮಾರ್ಟ್ ಸಿಟಿ ಹಾಗೂ ಅಮೃತ್ ಯೋಜನೆಯನ್ನು ನಗರಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಇದರಿಂದ ರಸ್ತೆಗಳ ಅಗಲೀಕರಣ, ಟವರ್ ಕ್ಲಾಕ್ ಎದ್ದು ನಿಂತಿದೆ ಎಂದು ಸಂಸದ ನಳಿನ್ ತಿಳಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಯೋಗೀಶ್ ಭಟ್, ನಾಯಕರಾದ ಜಿತೇಂದ್ರ ಕೊಟ್ಟಾರಿ, ಉದಯ ಕುಮಾರ್ ಶೆಟ್ಟಿ, ರವಿಶಂಕರ್ ಮಿಜಾರು, ಕಿಶೋರ್ ರೈ, ಭಾಸ್ಕರ ಚಂದ್ರ ಶೆಟ್ಟಿ, ಸಂಜಯ್ ಪ್ರಭು, ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago