ನವದೆಹಲಿ: ದೇಶಕ್ಕೆ ಕ್ರಾಂತಿಯ ಬದಲು ವಿಕಾಸದ ಅಗತ್ಯವಿದೆ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶದ ಇತಿಹಾಸವನ್ನು ಉಳಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವರ್ಚುವಲ್ ಕಾನ್ಫರೆನ್ಸಿಂಗ್ ಮೂಲಕ ಅಖಿಲ ಭಾರತ ಮೇಯರ್‌ಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ವಿಕಾಸವನ್ನು ನಂಬಬೇಕು. ಭಾರತಕ್ಕೆ ಕ್ರಾಂತಿಯ ಅಗತ್ಯವಿಲ್ಲ, ಆದರೆ ವಿಕಾಸದ ಅಗತ್ಯವಿದೆ. ನಾವು ನಮ್ಮಲ್ಲಿರುವ ಎಲ್ಲವನ್ನು ರಕ್ಷಿಸಬೇಕು ಮತ್ತು ತಾಂತ್ರಿಕ ಉನ್ನತೀಕರಣದತ್ತ ಸಾಗಬೇಕು ಎಂದಿದ್ದಾರೆ.
ಭಾರತದ ಇತಿಹಾಸ ಮತ್ತು ಸಾಂಪ್ರದಾಯವು ಅಭಿವೃದ್ಧಿಯ ಜೊತೆಯಲ್ಲಿ ಸಾಗಬೇಕು. ನಮ್ಮ ದೇಶದ ಬಹುತೇಕ ನಗರಗಳು ಸಾಂಪ್ರದಾಯಿಕ ನಗರಗಳಾಗಿದ್ದು, ಸಂಪ್ರದಾಯಿಕ ರೀತಿಯಲ್ಲಿ ಅಭಿವೃದ್ಧಿ ಹೊಂದಿದ್ದು, ಆಧುನೀಕರಣದ ಈ ಯುಗದಲ್ಲಿ ಈ ನಗರಗಳ ಪ್ರಾಚೀನತೆಯೂ ಅಷ್ಟೇ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ವಾರಣಾಸಿ ಮಾರ್ಗಸೂಚಿಗಳು ನಮಗೆ ಹೇಗೆ ದೇಶವನ್ನು ಅಭಿವೃದ್ಧಿಗೊಳಿಸಬಹುದು ಎಂಬುವುದಕ್ಕೆ ಸಾಕಷ್ಟು ಐಡಿಯಾ ನೀಡುತ್ತದೆ ಎಂದು ಉದಾಹರಣೆ ನೀಡಿದ ಅವರು, ಇಲ್ಲಿನ ನದಿಗಳ ಸ್ವಚ್ಛತೆಯ ಮಹತ್ವವದ ಬಗ್ಗೆ ಕೂಡ ತಿಳಿಸಿದರು.
ಪ್ರಪಂಚದಾದ್ಯಂತ ಪ್ರವಾಸಿಗರು ಗಂಗಾ ಘಾಟ್‍ಗೆ ಆಗಮಿಸುತ್ತಾರೆ. ಕಾಶಿಯ ಆರ್ಥಿಕತೆಯನ್ನು ನಿಭಾಯಿಸುವಲ್ಲಿ ಗಂಗಾ ಮಾತೆಯ ಮಹತ್ವದ ಕೊಡುಗೆ ಹೊಂದಿದ್ದೇವೆ. ನಾವೆಲ್ಲರೂ ನಮ್ಮ ನಗರಗಳಲ್ಲಿನ ನದಿಯ ಬಗ್ಗೆ ಸೂಕ್ಷ್ಮವಾದ ವಿಧಾನವನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.
ಪ್ರತಿ ವರ್ಷ ನಮ್ಮ ನಗರಗಳಲ್ಲಿ ಏಳು ದಿನಗಳ ಕಾಲ ನದಿಯ ಹಬ್ಬವನ್ನು ಆಚರಿಸಬೇಕು. ಈ ಹಬ್ಬದಂದು ಇಡೀ ನಗರದ ಜನರೆಲ್ಲಾ ಸೇರಿ ನದಿಯನ್ನು ಸ್ವಚ್ಛಗೊಳಿಸಬೇಕು ಮತ್ತು ಅದರ ವಿಶೇಷತೆಯ ಬಗ್ಗೆ ಗಮನ ಹರಿಸಬೇಕು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…