Featured

ಅಭಿವೃದ್ಧಿ ಕಾಮಗಾರಿ ಕೆಲಸ ಕಾರ್ಯಗಳನ್ನು ಮಾಡಲು ತೆನೆಹೊತ್ತ ಮಹಿಳೆಗೆ ಮತ ನೀಡಿ : ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ: ಈ ಚುನಾವಣೆ ದೇಶದ ಭವಿಷ್ಯವನ್ನು ತೀರ್ಮಾನಿಸಲಿದೆ. ದೇಶದಲ್ಲಿ ಭಾವನಾತ್ಮಕವಾಗಿ ಜನರನ್ನು ದಿಕ್ಕುತಪ್ಪಿಸುವ ಶಕ್ತಿಗಳನ್ನು ದೂರ ಇಟ್ಟು ಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿಯುವವರಿಗೆ ಮತ ಚಲಾಯಿಸಬೇಕೆಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರು ಹೇಳಿದರು.

ಅವರು ಭಾನುವಾರ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್-ಜೆ.ಡಿಎಸ್. ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜರ ಪರವಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರು ಹೆಜಮಾಡಿ ಪೇಟೆ ಹಾಗೂ ಸುತ್ತಮುತ್ತ ಪಾದಯಾತ್ರೆ ಮೂಲಕ ಮತಯಾಚನೆ ವೇಳೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ದೇಶದ ಐದು ಕೋಟಿ ಬಡ ಕುಟುಂಬಕ್ಕೆ ಮಾಸಿಕ ರೂ. 6000 ನೀಡುವ ಮೂಲಕ ಕನಿಷ್ಠ ಆದಾಯ ಕಲ್ಪಸಲಾಗುವುದು. ಈ ಯೋಜನೆಯಡಿ ವಾರ್ಷಿಕ 72,000 ರೂಪಾಯಿ ನೀಡಲಾಗುವುದು. ರೈತರಿಗೆ ಸಾಲ ಮನ್ನಾ, ಸಾಲ ಮುಕ್ತಿ ಯೋಜನೆ, ಪ್ರತ್ಯೇಕ ಬಜೆಟ್ ಮಂಡನೆ, ಒಂದೇ ಸ್ಲ್ಯಾಬ್ನ ಅಡಿ ಜಿ.ಎಸ್.ಟಿ.ಯನ್ನು ತಂದು ರೈತರಿಗೆ ಹಾಗೂ ಬಡ ಮಧ್ಯಮ ಜನತೆ ಸಂತೃಪ್ತಿಯ ಜೀವನ ಸಾಗಿಸುವಂತೆ ಕಾಂಗ್ರೆಸ್ ಕ್ರಮ ಕೈಗೊಳ್ಳಲಿದೆ. ಯಾವುದೇ ಹೊಸ ಉದ್ಯಮಗಳಿಗೆ ಮೊದಲ 3 ವರ್ಷ ಅನುಮತಿ ಕಡ್ಡಾಯವನ್ನು ರದ್ದುಗೊಳಿಸಿ ಹೊಸ ಉದ್ಯಮಗಳಿಗೆ ಪ್ರೋತ್ಸಾಹ ನೀಡಲಾಗುವುದು. 2020ರ ಒಳಗೆ ಖಾಲಿ ಇರುವ 22 ಲಕ್ಷ ಸರಕಾರಿ ಹುದ್ದೆಗಳ ಭರ್ತಿಯೊಂದಿಗೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರಮೋದ್ ಮಧ್ವರಾಜ್ ಗೆಲುವು ಖಚಿತ, ಲೋಕಸಭಾ ಕ್ಷೇತ್ರದ ಅಭಿವೃದ್ಧಿ ನಿಶ್ಚಿತ ಎಂದು ವಿನಯ ಕುಮಾರ್ ಸೊರಕೆಯವರು ಮತಯಾಚನಾ ಸಂದರ್ಭದಲ್ಲಿ ಅಲ್ಲಲ್ಲಿ ನಡೆದ ಸಭೆಗಳಲ್ಲಿ ಹೇಳಿದರು.

ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ರು ಮಾತನಾಡುತ್ತಾ ಕಳೆದ ಐದು ವರ್ಷಗಳಿಂದ ಜನರ ಸಂಪರ್ಕಕ್ಕೆ ಸಿಗದೇ ಇದ್ದ ಸಂಸದರನ್ನು ನೀವು ಆಯ್ಕೆ ಮಾಡುತ್ತೀರೋ ಅನ್ನುವ ಪ್ರಶ್ನೆ ನಿಮ್ಮ ಮುಂದೆ ಇಡುತ್ತಿದ್ದೇನೆ. ನಾನು ಸಚಿವನಾಗಿದ್ದಾಗ ಎಲ್ಲಾ ವಿಧಾನಸಭಾ ಕ್ಷೇತ್ರದ ಜನತೆಯ ಸಮಸ್ಯೆಗೆ ಸ್ಪಂದಿಸಿರುತ್ತೇನೆ.

ವಿಶೇಷವಾಗಿ ದಿನದ 24 ಗಂಟೆಗಳ ಅವಧಿಯೂ ವಿದ್ಯುತ್ ಪೂರೈಕೆಯಾಗುವಂತೆ ಪ್ರಯತ್ನ ಮಾಡಿದ್ದೇನೆ. ಮೀನುಗಾರರ ಸಮಸ್ಯೆ, ಮರಳುಗಾರಿಕೆ ಸಮಸ್ಯೆ, ನಿರುದ್ಯೋಗ ಸಮಸ್ಯೆ, ಅಲ್ಪಸಂಖ್ಯಾತರ ಸಮಸ್ಯೆ ಅಲ್ಲದೆ ಪ್ರಮುಖ ಸಮಸ್ಯೆಗಳನ್ನು ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ವಿನಯ ಕುಮಾರ್ ಸೊರಕೆಯವರು ಮಾಡಿರುತ್ತಾರೆ. ಇನ್ನು ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸೊರಕೆಯವರೊಂದಿಗೆ ಸೇರಿ ಕೋಟಿ-ಚೆನ್ನಯರಂತೆ ಕೆಲಸ ಕಾರ್ಯಗಳನ್ನು ಮಾಡುತ್ತೇವೆ. ನನ್ನ ಚಿಹ್ನೆ ತೆನೆಹೊತ್ತ ಮಹಿಳೆಗೆ ಮತವನ್ನು ನೀಡಬೇಕೆಂದು ಕಾಂಗ್ರೆಸ್ ಮತ್ತು ಜೆ.ಡಿ.ಎಸ್. ಮೈತ್ರಿ ಅಭ್ಯರ್ಥಿಯಾದ ಪ್ರಮೋದ್ ಮಧ್ವರಾಜರು ಜನರಲ್ಲಿ ವಿನಂತಿಸಿಕೊಂಡರು.

ಅವರೊಂದಿಗೆ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ, ಎಂ.ಎ. ಗಪೂರ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ಅಜೀಜ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಲೆವೂರು ಹರೀಶ್ ಕಿಣಿ, ಸರಸು ಡಿ. ಬಂಗೇರಾ, ನವೀನ್ಚಂದ್ರ ಸುವರ್ಣ, ವಿಶ್ವಾಸ್ ವಿ. ಅಮೀನ್, ಎಂ.ಪಿ. ಮೊಯಿದಿನಬ್ಬ, ಗಣೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago