Featured

ಅಭ್ಯರ್ಥಿಯಾರಾಗುತ್ತಾರೆ ಎಂಬುದು ಮುಖ್ಯವಲ್ಲ ,ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಮುಖ್ಯ :ಶೋಭಾ ಕರಂದ್ಲಾಜೆ – Vishwanews24

ಉಡುಪಿ: ಬಿಜೆಪಿ ಕಾರ್ಯಕರ್ತರಿಂದಲೇ ತೀವ್ರ ವಿರೋಧ ಎದುರಿಸುತ್ತಿರುವ ಶೋಭಾ ಕರಂದ್ಲಾಜೆ ಕುಂದಾಪುರದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಲೋಕಸಭಾ ಚುನಾವಣೆಗೆ ಯಾರು ಅಭ್ಯರ್ಥಿಯಾಗುತ್ತಾರೆ‌ ಮುಖ್ಯವಲ್ಲ, ನರೇಂದ್ರ ಮೋದಿ ಪ್ರಧಾನಿಯಾಗುವುದು ಮುಖ್ಯ ಎಂದು ಹೇಳಿದ್ದಾರೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ಹೈಕಮಾಂಡ್ ಸ್ಪಷ್ಟಪಡಿಸಿಲ್ಲ. ಆದರೆ ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿ ಯಾರೆನ್ನುವುದಕ್ಕಿಂತ ಮೋದಿಯೇ ಅಭ್ಯರ್ಥಿ ಎನ್ನುವ ಅಂಶವನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಆ ಮೂಲಕ ನಮ್ಮ ಅಭ್ಯರ್ಥಿಯನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು. ಅದಕ್ಕಾಗಿ ಮೋದಿಯವರನ್ನೇ ಮುಂದೆ ತರಬೇಕು ಮತ್ತು ಬಿಜೆಪಿ ಚಿಹ್ನೆಯಾದ ಕಮಲದ ಗುರುತನ್ನು ಸ್ಪಷ್ಟಪಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಜೆ.ಡಿ.ಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಸ್ಪರ್ಧಿಸುವ ಸೂಚನೆ ಸಿಕ್ಕಿದ್ದು ಇದೀಗ ಶೋಭಾ ಕರಂದ್ಲಾಜೆ ಬಿಜೆಪಿಯ ಅಭ್ಯರ್ಥಿಯಾದರೆ ಸ್ವಲ್ಪ ಮಟ್ಟಿನ ಪೈಪೋಟಿ ನಿರೀಕ್ಷಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago