Featured

ಅಮರನಾಥ ಯಾತ್ರೆ ಪುನರಾಂಭಿಸಿದ ಬಂಟ್ವಾಳದ ಯಾತ್ರಿಕರ ತಂಡ – VIshwanews24

ಅಮರನಾಥ ಯಾತ್ರೆ ಪುನರಾಂಭಿಸಿದ ಬಂಟ್ವಾಳದ ಯಾತ್ರಿಕರ ತಂಡ

ಬಂಟ್ವಾಳ: ಅಮರನಾಥದ ಪವಿತ್ರ ಗುಹಾಲಯದ ಸಮೀಪದಲ್ಲಿ ಶುಕ್ರವಾರ ಉಂಟಾದ ಮೇಘ ಸ್ಪೋಟದಿಂದ ದಿಢೀರ್ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಸೋಮವಾರ ಬೆಳಿಗ್ಗೆ ಪುನರಾರಂಭಿಸಲಾಗಿದ್ದು, ದಿನದ ಮಟ್ಟಿಗೆ ಮಿಲಿಟ್ರಿ ಬೇಸ್ ನಲ್ಲಿ ವಿಶ್ರಾಂತಿ ಪಡೆದಿದ್ದ ಬಂಟ್ವಾಳದ ಯಾತ್ರಿಕರೂ ದರ್ಶನದ ತವಕದಲ್ಲಿದ್ದಾರೆ.

ಅಮರನಾಥ ನಡೆದ ಮೇಘಸ್ಪೋಟದಿಂದ ಹಲವಾರು ಜೀವಹಾನಿ ಆಗಿತ್ತು, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಸಹಿತ ಎಲ್ಲಾ ಕನ್ನಡಿಗರೂ ಸುರಕ್ಷಿತರಾಗಿದ್ದಾರೆ ಎಂದೂ ಸರ್ಕಾರ ಸ್ಪಷ್ಟ ಪಡಿಸಿದ್ದರು. ನಡೆದಿದ್ದ ದುರ್ಘಟನೆ ಹಿನ್ನೆಲೆ ವಿವಿಧ ರಾಜ್ಯಗಳ ಹಲವರು ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿದ್ದರು. ಆದರೆ ಅಮರನಾಥ ದ ವರೆಗೆ ತಲುಪಿದ್ದ ಬಂಟ್ವಾಳದ ತಂಡ‌ ಮಿಲಿಟ್ರಿ‌ ಬೇಸ್ ನಲ್ಲಿ ಇತರ ಸಹಸ್ರ ಸಹಸ್ರ ಯಾತ್ರಿಗಳ ಜೊತೆ ವಿಶ್ರಾಂತಿ ಪಡೆದಿದ್ದರು.ಭಾನುವಾರ ಸ್ಥಳಕ್ಕೆ ಭೇಟಿ‌ ನೀಡಿದ್ದ ಅಲ್ಲಿನ ರಾಜ್ಯಪಾಲರು ಸೋಮವಾರ ಬೆಳಿಗ್ಗೆ ದರ್ಶನಕ್ಕೆ ಅವಕಾಶ ಒದಗಿಸುವುದಾಗಿ ತಿಳಿಸಿದ್ದು, ಅದರಂತೆ ಇಂದು ಬೆಳಗ್ಗೆಯಿಂದ ಅಮರನಾಥ ದರ್ಶನಕ್ಕೆ ತೆರಳುತ್ತಿರುವುದಾಗಿ‌ ಯಾತ್ರಿ ಸುರೇಶ್ ಕೋಟ್ಯಾನ್ ಮಾಹಿತಿ‌ ನೀಡಿದ್ದಾರೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago