Featured

ಅಮಾನತುಗೊಂಡ ಬೆನ್ನಲ್ಲೇ ಬಿಆರ್​ಎಸ್ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಸಿಆರ್‌ ಪುತ್ರಿ ಕವಿತಾ – vishwanews24

ಅಮಾನತುಗೊಂಡ ಬೆನ್ನಲ್ಲೇ ಬಿಆರ್​ಎಸ್ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಸಿಆರ್‌ ಪುತ್ರಿ ಕವಿತಾ

ಹೈದರಾಬಾದ್ : ಭಾರತ್ ರಾಷ್ಟ್ರ ಸಮಿತಿ ಪಕ್ಷದಿಂದ ಅಮಾನತುಗೊಂಡಿದ್ದ ಕೆ ಕವಿತಾ ಅವರು ಇಂದು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಅವರು ರಾಜೀನಾಮೆ ಕೊಟ್ಟಿದ್ದಾರೆ. ಕವಿತಾ ಅವರು ಭಾರತ್ ರಾಷ್ಟ್ರ ಸಮಿತಿ ಸಂಸ್ಥಾಪಕ ಹಾಗೂ ಮಾಜಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಮಗಳು. ತಮ್ಮನ್ನು ಬಿಆರ್​ಎಸ್ ಪಕ್ಷದಿಂದ ದಿಢೀರನೇ ಉಚ್ಛಾಟನೆ ಮಾಡುವ ಕ್ರಮದಿಂದ ಬಹಳ ನೋವಾಯಿತು ಎಂದು ಕವಿತಾ ಅವರು ತಮ್ಮ ರಾಜೀನಾಮೆ ನಿರ್ಧಾರಕ್ಕೆ ಕಾರಣ ನೀಡಿದ್ದಾರೆ.

‘ಎಂಎಲ್​ಸಿ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಕವಿತಾ ತಿಳಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸಭಾಧ್ಯಕ್ಷರು ಹಾಗೂ ಕೆ. ಚಂದ್ರಶೇಖರ್ ರಾವ್ ಅವರಿಗೆ ಕಳುಹಿಸುತ್ತಿದ್ದೇನೆ ಎಂದು ಹೇಳಿರುವ ಕವಿತಾ, ತಾನು ಯಾವುದೇ ಪಕ್ಷದೊಂದಿಗೆ ಹೋಗುತ್ತಿಲ್ಲ. ತೆಲಂಗಾಣ ಜಾಗೃತಿ ಸದಸ್ಯರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

17 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

24 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

30 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

53 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago