Featured

ಅಮಾನತ್ತಾದ ಪೊಲೀಸ್ ಪೇದೆಗೆ ಸಿಎಂ ಪದಕ : ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ – vishwanews24

ಅಮಾನತ್ತಾದ ಪೊಲೀಸ್ ಪೇದೆಗೆ ಸಿಎಂ ಪದಕ : ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ

ಬೆಂಗಳೂರು: ಸ್ವಾತಂತ್ರೋತ್ಸವದ ವೇಳೆ ಕೊಡಮಾಡುವ ‘ಸಿಎಂ ಪದಕ’ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಾದ ಪೊಲೀಸ್ ಪೇದೆಯ ಹೆಸರು ಪ್ರಕಟವಾಗಿರುವುದು ಗೃಹ ಇಲಾಖೆಯ ಅಧಃಪತನಕ್ಕೆ ನಿದರ್ಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಪೇದೆ ಅಮಾನತು ಆದೇಶದ ಪ್ರತಿಯನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡು ಪೋಸ್ಟ್ ಹಾಕಿರುವ ವಿಜಯೇಂದ್ರ, ಕೆಲ ನಾಮಧೇಯಗಳನ್ನು ಕಂಡರೆ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿಕೊಳ್ಳುತ್ತದೆ. ಅಪರಾಧಿಯಾಗಿದ್ದರೂ ಸರಿ, ಕೊನೆಗೆ ಭಯೋತ್ಪಾದಕರಾದರೂ ಸರಿ, ಅವರ ಬಗೆಗಿನ ಕಾಳಜಿಯಲ್ಲಿ ರಾಜೀಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಸಾಬೀತುಪಡಿಸುವ ರೀತಿಯಲ್ಲಿ ಸ್ವಾತಂತ್ರೋತ್ಸವದ ವೇಳೆ ಕೊಡಮಾಡುವ ಸಿಎಂ ಪದಕ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಿಗೊಳಗಾದ ಪೊಲೀಸ್‌ ಪೇದೆಯೊಬ್ಬರ ಹೆಸರು ಪ್ರಕಟವಾಗಿದೆ ಎಂದು ಕಿಡಿಕಾರಿದ್ದಾರೆ.

ಸಲೀಂ ಪಾಷಾ ಎಂಬ ಪೇದೆ ಪದಕ ಪಟ್ಟಿಗೆ ಸೇರ್ಪಡೆಗೊಂಡ ಅದೃಷ್ಟವಂತ. ಅಪರಾಧಿಗಳೊಂದಿಗೆ ಕೈಜೋಡಿಸಿ ಕಳ್ಳತನಗಳಿಗೆ ನೆರವಾಗುತ್ತಿದ್ದ ಹಾಗೂ ಇಲಾಖೆಯ ದಾಖಲೆಗಳನ್ನು ಸೋರಿಕೆ ಮಾಡುವ ವಿದ್ರೋಹ ಕೃತ್ಯದ ಆರೋಪದ ಮೇಲೆ ಅಮಾನತಾಗಿರುವುದೇ ಈತನ ಅರ್ಹತೆಯಾಗಿರುವಂತಿದೆ. ಇಂತಹ ಪೇದೆಯ ಹೆಸರು ಪದಕ ಪಟ್ಟಿಯಲ್ಲಿರುವುದು ಗೃಹ ಇಲಾಖೆ ಅಧಃಪತನಕ್ಕೆ ನಿದರ್ಶನವಾಗಿದೆ ಎಂದು ಟೀಕಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago