ಬೆಂಗಳೂರು: ಸ್ವಾತಂತ್ರೋತ್ಸವದ ವೇಳೆ ಕೊಡಮಾಡುವ ‘ಸಿಎಂ ಪದಕ’ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಾದ ಪೊಲೀಸ್ ಪೇದೆಯ ಹೆಸರು ಪ್ರಕಟವಾಗಿರುವುದು ಗೃಹ ಇಲಾಖೆಯ ಅಧಃಪತನಕ್ಕೆ ನಿದರ್ಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಪೇದೆ ಅಮಾನತು ಆದೇಶದ ಪ್ರತಿಯನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡು ಪೋಸ್ಟ್ ಹಾಕಿರುವ ವಿಜಯೇಂದ್ರ, ಕೆಲ ನಾಮಧೇಯಗಳನ್ನು ಕಂಡರೆ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿಕೊಳ್ಳುತ್ತದೆ. ಅಪರಾಧಿಯಾಗಿದ್ದರೂ ಸರಿ, ಕೊನೆಗೆ ಭಯೋತ್ಪಾದಕರಾದರೂ ಸರಿ, ಅವರ ಬಗೆಗಿನ ಕಾಳಜಿಯಲ್ಲಿ ರಾಜೀಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಸಾಬೀತುಪಡಿಸುವ ರೀತಿಯಲ್ಲಿ ಸ್ವಾತಂತ್ರೋತ್ಸವದ ವೇಳೆ ಕೊಡಮಾಡುವ ಸಿಎಂ ಪದಕ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಿಗೊಳಗಾದ ಪೊಲೀಸ್ ಪೇದೆಯೊಬ್ಬರ ಹೆಸರು ಪ್ರಕಟವಾಗಿದೆ ಎಂದು ಕಿಡಿಕಾರಿದ್ದಾರೆ.
ಸಲೀಂ ಪಾಷಾ ಎಂಬ ಪೇದೆ ಪದಕ ಪಟ್ಟಿಗೆ ಸೇರ್ಪಡೆಗೊಂಡ ಅದೃಷ್ಟವಂತ. ಅಪರಾಧಿಗಳೊಂದಿಗೆ ಕೈಜೋಡಿಸಿ ಕಳ್ಳತನಗಳಿಗೆ ನೆರವಾಗುತ್ತಿದ್ದ ಹಾಗೂ ಇಲಾಖೆಯ ದಾಖಲೆಗಳನ್ನು ಸೋರಿಕೆ ಮಾಡುವ ವಿದ್ರೋಹ ಕೃತ್ಯದ ಆರೋಪದ ಮೇಲೆ ಅಮಾನತಾಗಿರುವುದೇ ಈತನ ಅರ್ಹತೆಯಾಗಿರುವಂತಿದೆ. ಇಂತಹ ಪೇದೆಯ ಹೆಸರು ಪದಕ ಪಟ್ಟಿಯಲ್ಲಿರುವುದು ಗೃಹ ಇಲಾಖೆ ಅಧಃಪತನಕ್ಕೆ ನಿದರ್ಶನವಾಗಿದೆ ಎಂದು ಟೀಕಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…