ರಾಮನಗರ: ಜಿಲ್ಲೆಯ ಹಾರೋಹಳ್ಳಿ ಸಮೀಪದ ದಯಾನಂದ ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಅಮಾನವೀಯ ಘಟನೆಯೊಂದು ನಡೆದಿದೆ.
ಆಸ್ಪತ್ರೆಯ ರೇಡಿಯಾಲಜಿ ಡಿಪಾರ್ಟ್ಮೆಂಟ್ ಬ್ಲಾಕ್‌ನ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಆಗ ತಾನೇ ಜನಿಸಿರುವ ಮಗುವನ್ನು ಟಾಯ್ಲೆಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಲಾಗಿದೆ.
ಬಳಿಕ ಶೌಚಾಲಯದಲ್ಲಿ ನೀರು ಹೋಗದೇ ಕಟ್ಟಿಕೊಂಡ ಹಿನ್ನೆಲೆ ಹೌಸ್ ಕೀಪಿಂಗ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದೆ. ಮಗು ಜನನವನ್ನ ಮರೆಮಾಚಲು ಯಾರೋ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.
ಸದ್ಯ ಈ ಸಂಬಂಧ ಆಸ್ಪತ್ರೆ ವೈದ್ಯರು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದು, ಮಗುವಿನ ಡಿಎನ್‌ಎ ವರದಿ ಆಧರಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…