Featured

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು

ಸೋನಿಪತ್: ತಮ್ಮ ಇಡೀ ಜೀವನವನ್ನು ಮೂವರು ಹೆಣ್ಣುಮಕ್ಕಳ ಬೆಳೆಸಲು ಮತ್ತು ಅವರಿಗೆ ಉತ್ತಮ ಶಿಕ್ಷಣ ನೀಡಲು ಮುಡಿಪಾಗಿಟ್ಟಿದ್ದ ವೃದ್ಧ ತಂದೆಯೊಬ್ಬರು  ಹರ್ಯಾಣದ ಸೋನಿಪತ್‌ನ ವೃದ್ಧಾಶ್ರಮವೊಂದರಲ್ಲಿ ಕೊನೆಯುಸಿರೆಳೆದಿದ್ದು, ಅಂತಿಮ ದರ್ಶನಕ್ಕೂ ಬರಲಾಗದ ಪುತ್ರಿಯರು ವಿಡಿಯೋ ಕಾಲ್  ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಅಮಾನವೀಯ ಘಟನೆ ನಡೆದಿದೆ.

ಮೂಲತಃ ಮುಂಬೈನ ಜವಳಿ ಉದ್ಯಮಿ ಶಿವಚರಣ್ ರಾಮ್ ರತನ್ ಗುಪ್ತಾ ಅವರು ಕಳೆದ ಎರಡು ವರ್ಷಗಳಿಂದ ಈ ವೃದ್ಧಾಶ್ರಮದಲ್ಲಿ ನೆಲೆಸಿದ್ದರು. ಹಿಂದೆ ಅವರ ಪತ್ನಿ ಮೀನಾ ಕೂಡ ಇಲ್ಲೇ ಮೃತಪಟ್ಟಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಗುಪ್ತಾ ಅವರು ಮಂಗಳವಾರ ಮುಂಜಾನೆ 3:30 ರ ಸುಮಾರಿಗೆ ನಿಧನರಾದರು.

ಮೃತರ ಮೂವರು ಪುತ್ರಿಯರಾದ ಅನಿತಾ ನೇಪಾಳದಲ್ಲಿ ಶಿಕ್ಷಕಿಯಾಗಿದ್ದರೆ, ನಿಶಾ ಉತ್ತರ ಪ್ರದೇಶದ ಅಜಂಘಡ್‌ನಲ್ಲಿದ್ದರೆ ಕಿರಿಯ ಮಗಳು ಪ್ರಿಯಾ ಮುಂಬೈನಲ್ಲಿ ನೆಲೆಸಿದ್ದಾರೆ.

ಗುಪ್ತಾ ಅವರ ನಿಧನದ ಸುದ್ದಿ ತಿಳಿದರೂ ತಮಗೆ ಬರಲು ಸಮಯವಿಲ್ಲ ಎಂದು ಪುತ್ರಿಯರು ತಿಳಿಸಿದ ಕಾರಣ, ವೃದ್ಧಾಶ್ರಮದ ಆಡಳಿತ ಮಂಡಳಿ ಹಾಗೂ ಸ್ಥಳೀಯ ನಿವಾಸಿಗಳ ಸಹಾಯದಿಂದ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪುತ್ರಿಯರು ವಿಡಿಯೋ ಕಾಲ್ ಮೂಲಕವೇ ಕಾರ್ಯವನ್ನು ವೀಕ್ಷಿಸಿದರು. ನೇಪಾಳದಲ್ಲಿರುವ ಮಗಳು ಅನಿತಾ ಆನ್‌ಲೈನ್ ಮೂಲಕ 5,100 ರೂಪಾಯಿ ಕಳುಹಿಸಿ ತಂದೆಯ ಅಂತ್ಯಸಂಸ್ಕಾರವನ್ನು ಸರಿಯಾಗಿ ನೆರವೇರಿಸುವಂತೆ ಕೋರಿದ್ದರು.

ವೃದ್ಧಾಶ್ರಮದ ಆಡಳಿತಾಧಿಕಾರಿ ಆನಂದ್ ಕುಮಾರ್ ಪ್ರತಿಕ್ರಿಯಿಸಿ, ಗುಪ್ತಾ ಅವರ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ 20 ದಿನಗಳ ಹಿಂದೆಯೇ ಪುತ್ರಿಯರಿಗೆ ತಿಳಿಸಲಾಗಿತ್ತು. ಆದರೂ ಅವರು ತಂದೆಯನ್ನು ನೋಡಲು ಬರಲಿಲ್ಲ. ಅಂತಿಮ ಸಂಸ್ಕಾರದ ವೇಳೆ ವಿಡಿಯೋ ಕರೆ ಮುಖಾಂತರ ಸಂಪರ್ಕದಲ್ಲಿದ್ದ ಮಗಳೊಬ್ಬಳು, ‘ಇನ್ನು ಎಷ್ಟು ಸಮಯ ಬೇಕಾಗುತ್ತದೆ? ನಾವು ಊಟ ಮಾಡಿ ಸ್ನಾನ ಮಾಡಬೇಕು’ ಎಂದು ಹೇಳಿದ್ದರು ಎಂಬುದಾಗಿ ಬೇಸರ ಹೊರಹಾಕಿದರು.

ತಮ್ಮ ಮಗಳಂದಿರ ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಿದ್ದ ಗುಪ್ತಾ, ಅವರ ಸಾಧನೆಗಳ ಬಗ್ಗೆ ಹೆಮ್ಮೆಪಡುತ್ತಿದ್ದರು. ಅವರ ಪೈಕಿ ಇಬ್ಬರು ಶಿಕ್ಷಕಿಯರಾಗಿದ್ದಾರೆ. ಅಂತ್ಯಸಂಸ್ಕಾರದ ನಂತರ ಅಸ್ಥಿ ವಿಸರ್ಜನೆಗೂ ಬರಲು ಸಾಧ್ಯವಿಲ್ಲವೆಂದು ತಿಳಿಸಿದ ಕುಟುಂಬಸ್ಥರು, ಗಂಗಾನದಿಯಲ್ಲಿ ವಿಸರ್ಜಿಸುವಂತೆ ಆಡಳಿತ ಮಂಡಳಿಗೆ ವಿನಂತಿಸಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago