ರಾಜ್ಯ ನ್ಯೂಸ್

ಅಮಿತ್ ಶಾ ಭೇಟಿ ಹಿಂದೆ ರಾಜಕೀಯ ಇಲ್ಲ: ಶಿವಯೋಗ ಮಂದಿರದ ಅಧ್ಯಕ್ಷ ಸಂಗನಬಸವ ಸ್ವಾಮೀಜಿ

ಶಿವಯೋಗ ಮಂದಿರ ಒಂದು ರಾಜಕೀಯೇತರ ಸಂಸ್ಥೆಯಾಗಿದೆ. ಇಲ್ಲಿಗೆ ಯಾರೂ ಬೇಕಾದರೂ ಭೇಟಿ ಮಾಡಬಹುದು. ಈ ಹಿಂದೆ ರಾಜಕೀಯ ಮುಖಂಡರಾದ ಸೋನಿಯಾ ಗಾಂಧಿ, ಎಲ್.ಕೆ. ಅಡ್ವಾಣಿ ಭೇಟಿ ನೀಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಯ ಹಿಂದೆ ಯಾವುದೇ ರಾಜಕೀಯ ಇಲ್ಲ’ ಎಂದು ಶಿವಯೋಗ ಮಂದಿರದ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಹೇಳಿದರು.

ಬಾಗಲಕೋಟೆ: ‘ಶಿವಯೋಗ ಮಂದಿರ ಒಂದು ರಾಜಕೀಯೇತರ ಸಂಸ್ಥೆಯಾಗಿದೆ. ಇಲ್ಲಿಗೆ ಯಾರೂ ಬೇಕಾದರೂ ಭೇಟಿ ಮಾಡಬಹುದು. ಈ ಹಿಂದೆ ರಾಜಕೀಯ ಮುಖಂಡರಾದ ಸೋನಿಯಾ ಗಾಂಧಿ, ಎಲ್.ಕೆ. ಅಡ್ವಾಣಿ ಭೇಟಿ ನೀಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಯ ಹಿಂದೆ ಯಾವುದೇ ರಾಜಕೀಯ ಇಲ್ಲ’ ಎಂದು ಶಿವಯೋಗ ಮಂದಿರದ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಹೇಳಿದರು.

ಮಂಗಳವಾರ ಶಿವಯೋಗ ಮಂದಿರಕ್ಕೆ ಅಮಿತ್ ಶಾ ಅವರು ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ಅವರು ಮಾತನಾಡಿದರು.

‘ರಾಜಕೀಯ ಲಾಭ ಪಡೆಯುವುದು ‘ಶಾ’ ಅವರ ಉದ್ದೇಶವೂ ಆಗಿರಬಹುದು. ಆದರೆ ಶಿವಯೋಗ ಮಂದಿರ ಸ್ವಾಮೀಜಿಗಳನ್ನ ತಯಾರಿಸುವ ಸಂಸ್ಥೆಯಾಗಿದೆ. ಇಲ್ಲಿ ಎಲ್ಲಾ ಪಕ್ಷಗಳಿಗೂ ಮುಕ್ತ ಅವಕಾಶ ಇದೆ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರೂ ಇಲ್ಲಿಗೆ ಬರಬಹುದು’ ಎಂದರು.

‘ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ‌ಮಾನ್ಯತೆ ನೀಡಬಾರದು ಎಂದು ಅಮಿತ್ ಶಾ ಅವರಿಗೆ ಮನವಿ ಮಾಡಲಿದ್ದೇವೆ’ ಎಂದು ತಿಳಿಸಿದರು.

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ನಿಂತವರೆಲ್ಲರೂ ಲಿಂಗಧಾರಣೆ ಮಾಡಿಲ್ಲ. ಲಿಂಗಧಾರಣೆ ಅಂದರೆ ಏನು ಎನ್ನುವುದು ಗೊತ್ತಿಲ್ಲದವರು ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆ ಕೇಳುತ್ತಿದ್ದಾರೆ ಎಂದರು.

ಲಿಂಗಧಾರಣೆ ಮಾಡದವರಿಂದ ಬಸವಣ್ಣನವರ ಉಪದೇಶ ಕೇಳಬೇಕಾಗಿಲ್ಲ ನಾವು ಶೋಷಣೆಯ ವಿರುದ್ಧ ಇದ್ದವರು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ನಿರ್ಧಾರ ತೆಗೆದುಕೊಂಡಿದ್ದು ತಪ್ಪು, ಚುನಾವಣೆಯ ಹೊಸ್ತಿಲಲ್ಲಿ ಧರ್ಮ ಒಡೆಯುವ ಕೆಲಸ ಮಾಡಬಾರದಿತ್ತು ಎಂದು ವಾಗ್ದಾಳಿ ನಡೆಸಿದರು.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

2 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

2 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

4 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

5 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

6 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

6 hours ago