ಅಮಿತ್ ಶಾ ಮಂಗಳೂರು ಭೇಟಿ ನೀಡಿದರೆ ಮತ್ತೆ ಪ್ರಚೋದನೆಗೆ ಕಾರಣವಾಗುತ್ತದೆ, ಅವರ ಭೇಟಿಗೆ ಅವಕಾಶ ನೀಡಬಾರದು : ಐವನ್ ಡಿಸೋಜ -Vishwanews24

ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ಜನಜಾಗೃತಿ ಹೆಸರಿನಲ್ಲಿ ಸಮಾವೇಶ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ 19ರಂದು ಮಂಗಳೂರಿಗೆ ಭೇಟಿ ನೀಡುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಅಮಿತ್ ಶಾ’ ಹೆಸರಿನಲ್ಲಿ ಚಳವಳಿ ನಡೆಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಕಟಿಸಿದೆ.

ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾ ತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ‘ದಕ್ಷಿಣ ಕನ್ನಡ ಜಿಲ್ಲೆ ಈಗ ಶಾಂತ ಸ್ಥಿತಿಗೆ ಮರಳುತ್ತಿದೆ. ಈ ಹಂತದಲ್ಲಿ ಅಮಿತ್ ಶಾ ಭೇಟಿ ನೀಡಿದರೆ ಮತ್ತೆ ಪ್ರಚೋದನೆಗೆ ಕಾರಣವಾಗುತ್ತದೆ. ಆದ್ದರಿಂದ ಅವರ ಭೇಟಿಗೆ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು.

‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ರಾಜಕೀಯ ಪಕ್ಷವೇ ಪ್ರತಿಭಟನಕಾರರ ವಿರುದ್ಧ ಯುದ್ಧಕ್ಕೆ ಇಳಿದಂತೆ ವರ್ತಿಸಬಾರದು. ಅಮಿತ್ ಶಾ ಭೇಟಿಯಿಂದ ಜಿಲ್ಲೆಯಲ್ಲಿ ಶಾಂತಿ ಕದಡುತ್ತದೆ. ಅದನ್ನು ವಿರೋಧಿಸಿ ನಾವು ಉಪವಾಸ ಸತ್ಯಾಗ್ರಹ ನಡೆಸುತ್ತೇವೆ’ ಎಂದು ಐವನ್ ಡಿಸೋಜ ತಿಳಿಸಿದರು.

ಗೋಲಿಬಾರ್ ನಲ್ಲಿ ಮೃತಪಟ್ಟವರ ಮನೆಗಳಿಗೆ ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರು ಭೇಟಿ ನೀಡಿಲ್ಲ. ಕೇಂದ್ರ ಗೃ ಸಚಿವರು ರಾಜಕೀಯ ಮಾಡಲು ಬರುವುದನ್ನು ಮುಂದೂಡಿ, ಸಚಿವರು ಶಾಸಕರನ್ನು ಸಂತ್ರಸ್ತರ ಮನೆಗಳಿಗೆ ಕಳುಹಿಸಲಿ ಎಂದರು.

ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿಯ ಸದಸ್ಯರೇ ಹಿಂಸಾಚಾರ ನಡೆಸಿರುವ ಆರೋಪವಿದೆ. ದೆಹಲಿ ಪೊಲೀಸರು ಮತ್ತು ವಿಶ್ವವಿದ್ಯಾಲಯದ ಆಡಳಿತದ ಬೆಂಬಲದಲ್ಲೇ ಎಲ್ಲವೂ ನಡೆದಿದೆ ಎಂದು ದೂರಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago