ನವದೆಹಲಿ: ಕೊರೊನಾ ವೈರಸ್‌ನಿಂದ ಇತ್ತೀಚೆಗಷ್ಟೇ ಚೇತರಿಸಿಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ಮಂಗಳವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾರೆ.
ಉಸಿರಾಟದ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ಮಂಗಳವಾರ ನಸುಕಿನ ಜಾವ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎದೆಗೆ ಸಂಬಂಧಿಸಿದ ಸೋಂಕಿನ ಚಿಕಿತ್ಸೆಗೆ ಅವರಿಗೆ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ನೇತೃತ್ವದ ವೈದ್ಯರ ತಂಡ ಶಾಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಅಮಿತ್ ಶಾ ಅವರು ಕೊರೊನಾಗೆ ತುತ್ತಾಗಿ ಬಳಿಕ ಚೇತರಿಸಿಕೊಂಡಿದ್ದು, ಶುಕ್ರವಾರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ವಿಶ್ರಾಂತಿಗಾಗಿ ಕೆಲ ದಿನ ಕಾಲ ಮನೆಯಲ್ಲಿರುವುದಾಗಿ ಅವರು ಹೇಳಿದ್ದರು.
ಇದೀಗ ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ನೆಗೆಟಿವ್ ಬಂದ ಹಿನ್ನಲೆಯಲ್ಲಿ ಏಮ್ಸ್ ಪೋಸ್ಟ್ ಕೋವಿಡ್ ಕೇರ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…