ನಟಿ ಅಮೂಲ್ಯ ಅವರ ಇಬ್ಬರು ಮಕ್ಕಳ ಕೊರಳಲ್ಲೂ ಹುಲಿ ಉಗುರಿನ ಪೆಂಡೆಂಟ್ ಇದೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅನೇಕರು ಅಮೂಲ್ಯ ಅವರಿಗೆ ಪ್ರಶ್ನೆ ಮಾಡಿದ್ದರು. ಈ ಕುರಿತಂತೆ ಅಮೂಲ್ಯ ಸ್ಪಷ್ಟನೆ ನೀಡಿದ್ದಾರೆ. ಅವುಗಳು ಅಸಲಿ ಉಗುರುಗಳೇ ಅಲ್ಲ ಎಂದು ಹೇಳಿದ್ದಾರೆ.
ಮಕ್ಕಳ ನಾಮಕರಣದ ವೇಳೆ ಧರಿಸಿದ್ದ ಪೆಂಡೆಂಟ್ ನಲ್ಲಿಯ ಹುಲಿ ಉಗುರು ಅಸಲಿ ಅಲ್ಲ. ಸಿಂಥೆಟಿಕ್ ಹುಲಿ ಉಗುರು ಅವು. ಅಂತಹ ನಕಲಿ ಉಗುರುಗಳು 500-600ಗೆ ಸಿಗುತ್ತವೆ. ಅರಣ್ಯ ಅಧಿಕಾರಿಗಳು ಪರಿಶೀಲನೆಗೆ ಬಂದರೆ ಖಂಡಿತಾ ಅವುಗಳನ್ನು ನೀಡುತ್ತೇನೆ ಎಂದಿದ್ದಾರೆ ನಟಿ ಅಮೂಲ್ಯ. ಉಗುರುಗಳು ಅಸಲಿಯಲ್ಲ ಎನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ.
ವರ್ತೂರ್ ಸಂತೋಷ್ ಬಂಧನವಾಗುತ್ತಿದ್ದಂತೆಯೇ ಹುಲಿ ಉಗುರಿನ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳ ಮೇಲೆ ಸಾಮಾನ್ಯ ಜನರು ಮುಗಿ ಬಿದ್ದಿದ್ದಾರೆ. ಸಿನಿಮಾ ನಟರು, ಸಂನ್ಯಾಸಿಗಳು, ರಾಜಕಾರಣಿಗಳು ಹೀಗೆ ಅನೇಕರು ಹುಲಿ ಉಗುರು ಧರಿಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಸಮರ್ಥನೆಯನ್ನು ಮಾಡುತ್ತಿದ್ದಾರೆ.
ವರ್ತೂರ್ ಸಂತೋಷ್ ಮತ್ತು ಅರಣ್ಯಾಧಿಕಾರಿ ದರ್ಶನ್ ಹಾಗೂ ಇಬ್ಬರು ಅರ್ಚಕರನ್ನು ಈವರೆಗೂ ಬಂಧಿಸಲಾಗಿದೆ. ಸಂತೋಷ್ ಗೆ ನಿನ್ನೆ ಜಾಮೀನು ಮಂಜೂರಾಗಿ ಜೈಲಿನಿಂದ ಹೊರ ಬಂದಿದ್ದಾರೆ. ಉಳಿದಂತೆ ಅರಣ್ಯಾಧಿಕಾರಿಗಳು ತನಿಖೆಯನ್ನು ಮುಂದುವರೆಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…