Featured

ಅಮೃತಸರ ರೈಲು ದುರಂತ : ರೈಲು ಹರಿದು 62 ಸಾವು

ಅಮೃತಸರ: ಹಳಿ ಮೇಲೆ ನಿಂತು ರಾವಣ, ಮೇಘನಾದರ ಪ್ರತಿಕೃತಿ ದಹನ ಕಾರ್ಯಕ್ರಮ ನೋಡುತ್ತಿ ದ್ದವರ ಮೇಲೆ ರೈಲು ಸಂಚರಿಸಿ ಕನಿಷ್ಠ 62 ಮಂದಿ ಅಸುನೀ ಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ  ಪಂಜಾಬ್‌ನ ಅಮೃತಸರದಲ್ಲಿ ಸಂಭವಿಸಿದೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಜಲಂಧರ್‌ನಿಂದ  ಅಮೃತಸರಕ್ಕೆ ಬರುತ್ತಿದ್ದ ಡೆಮು ರೈಲು ಹಳಿಯ ಮೇಲೆ ನಿಂತಿದ್ದ ಜನರ ಮೇಲೆಯೇ ಸಂಚರಿಸಿತು. ಸ್ಥಳದಲ್ಲಿ 700ಕ್ಕೂ ಅಧಿಕ ಮಂದಿ ಸೇರಿದ್ದರು ಎಂದು ಸ್ಥಳೀಯ ಆಡಳಿತಾಧಿಕಾರಿ ಹೇಳಿದ್ದಾರೆ.

ಅಮೃತಸರ ರೈಲ್ವೇ ಸ್ಟೇಶನ್‌ನಿಂದ 2 ಕಿ.ಮೀ.ದೂರದಲ್ಲಿರುವ ಧೋಬಿ ಘಾಟ್‌ನ ರೈಲ್ವೆ ಹಳಿ ಬಳಿ ಸುಮಾರು 700ರಷ್ಟು ಮಂದಿ ಜಮಾಯಿಸಿ ರಾವಣನ ಪ್ರತಿಕೃತಿ ದಹನದ ದೃಶ್ಯ ನೋಡುತ್ತಿದ್ದರು. ಈ ವೇಳೆ ಪಟಾಕಿ ಸಿಡಿಸಿದ ಕಾರಣ ಎಕ್ಸ್‌ಪ್ರೆಸ್ ರೈಲು ಆಗಮಿಸಿದ್ದು ಅಲ್ಲಿದ್ದ ಜನರಿಗೆ ಗೊತ್ತಾಗಲಿಲ್ಲ. ಕೆಲವೇ ನಿಮಿಷದಲ್ಲಿ ರೈಲು ಜನರ ಮೇಲೆ ಹರಿದು ಹೋಗಿತ್ತು

ಸ್ಥಳೀಯರು ಆರೋಪಿಸಿರುವಂತೆ ರೈಲ್ವೇ ಇಲಾಖೆಯೇ ದುರಂತಕ್ಕೆ ಕಾರಣ. ರೈಲು ಬರುವ ಬಗ್ಗೆ ಮುನ್ನೆಚ್ಚರಿಕೆಯನ್ನೇ ನೀಡಿರಲಿಲ್ಲ. ಜತೆಗೆ ಸ್ಥಳೀಯ ದಸರಾ ಉತ್ಸವ ಆಯೋಜನಾ ಸಮಿತಿಯೂ ಈ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು ಎಂದಿದ್ದಾರೆ. ಪ್ರಧಾನಿ ಮೋದಿ ಘಟನೆಗೆ ಶೋಕ ವ್ಯಕ್ತಪಡಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಬಗ್ಗೆ ಸೂಚಿಸಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಆಘಾತ ವ್ಯಕ್ತಪಡಿಸಿದ್ದಾರೆ. ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಉಸ್ತುವಾರಿಗೆ ಆರೋಗ್ಯ, ಗೃಹ ಕಾರ್ಯದರ್ಶಿಗಳನ್ನು ºರು ಸಚಿವರನ್ನು ಕಳುಹಿಸಿ ಕೊಟ್ಟಿದ್ದಾರೆ. ಗಾಯಗೊಂಡ ಎಲ್ಲರಿಗೂ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಅಸುನೀಗಿದ ವ್ಯಕ್ತಿಗಳ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago