Featured

ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ ಮತ್ತು ಕಳ್ಳಸಾಗಾಣಿಕೆ- ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌ – vishwanews24

ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ ಮತ್ತು ಕಳ್ಳಸಾಗಾಣಿಕೆ- ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌

ಅಮೇರಿಕಾ : ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪದ ಮೇಲೆ ಬಿಹಾರ ಮೂಲದ ವ್ಯಕ್ತಿಯನ್ನು ಅಮೆರಿಕದಲ್ಲಿ ಬಂಧಿಸಿರುವುದು ಬೆಳಕಿಗೆ ಬಂದಿದೆ.

ಸಂಜಯ್ ಕುಮಾರ್ (43) ಅಮೆರಿಕಕ್ಕೆ ಸಾವಿರಾರು ಡಾಲರ್ ಮೌಲ್ಯದ ನಕಲಿ ಔಷಧಗಳನ್ನು ಮಾರಾಟ ಮತ್ತು ಕಳ್ಳಸಾಗಣೆ ಮಾಡಿದ ಆರೋಪ ಹೊತ್ತಿದ್ದಾರೆ.ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣದ ಪ್ರಕಾರ, ಸಂಜಯ್ ಮತ್ತು ತಂಡ ಅಮೆರಿಕಕ್ಕೆ ನಕಲಿ ಕ್ಯಾನ್ಸರ್ ಔಷಧಿಗಳನ್ನು ಮಾರಾಟ ಮಾಡಿದ್ದಾರೆ ಎಂದು ವರದಿಯಾಗಿದೆ.

ಕೀಟ್ರುಡಾ ಒಂದು ಕ್ಯಾನ್ಸರ್ ಇಮ್ಯುನೊಥೆರಪಿಯಾಗಿದ್ದು, ಇದನ್ನು 19 ವಿಧದ ಕ್ಯಾನ್ಸರ್‌ಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇದರ ತಯಾರಿಕೆ ಮತ್ತು ವಿತರಣೆಯನ್ನು ಮೆರ್ಕ್ ಶಾರ್ಪ್ ಮತ್ತು ಡೊಹ್ಮೆ ಎಲ್ಎಲ್ ಸಿ ಮೂಲಕ ಮಾತ್ರ ಮಾಡಬಹುದಾಗಿದೆ.

ಸಂಜಯ್ ಅವರನ್ನು ಜೂನ್ 26 ರಂದು ಹೂಸ್ಟನ್‌ನಲ್ಲಿ ಬಂಧಿಸಲಾಗಿದೆ. ಸಂಜಯ್ ಕುಮಾರ್ ವಿರುದ್ಧ ನಕಲಿ ಕ್ಯಾನ್ಸರ್ ಔಷಧಿಗಳ ಮಾರಾಟ ಮತ್ತು ಕಳ್ಳಸಾಗಾಣಿಕೆಯ ಆರೋಪವಿದ್ದು, ತಪ್ಪಿತಸ್ಥರೆಂದು ಸಾಬೀತಾದರೆ, ಅವರು ಪ್ರತಿ ಅಪರಾಧಕ್ಕೆ 20 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

4 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

8 hours ago