ಅಮೆರಿಕಾದಲ್ಲಿ ಮೊದಲ ಓಮಿಕ್ರೋನ್ ಪ್ರಕರಣ ಪತ್ತೆ – Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಅಮೆರಿಕಾದಲ್ಲಿ ಮೊದಲ ಓಮಿಕ್ರೋನ್ ಪ್ರಕರಣ ಪತ್ತೆ – Vishwanews24

ಕ್ಯಾಲಿಫೋರ್ನಿಯಾ : ಒಮಿಕ್ರೋನ್ ಎನ್ನುವ ಹೊಸ ರೂಪಾಂತರಿ ವೈರಸ್ ಅಮೆರಿಕದಲ್ಲಿ ಪತ್ತೆಯಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಲಸಿಕೆ ಪಡೆಯುವಂತೆ ವೈಟ್‌ಹೌಸ್ ಮನವಿ ಮಾಡಿದೆ.

ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ ವ್ಯಕ್ತಿಯಲ್ಲಿ ಒಮಿಕ್ರೋನ್ ಪತ್ತೆಯಾಗಿದೆ ಎಂದು ಅಮೆರಿಕಾ ದೃಢಪಡಿಸಿದೆ..

ಕ್ಯಾಲಿಫೋರ್ನಿಯಾದಲ್ಲಿರುವ ವ್ಯಕ್ತಿಯಲ್ಲಿ ಹೊಸ ರೂಪಾಂತರಿ ಪತ್ತೆಯಾಗಿದ್ದು ಇವರು ಈಗಾಗಲೇ ಕೋವಿಡ್ ಲಸಿಕೆ ಪಡೆದಿದ್ದಾರೆ ಎಂದು ಯುಎಸ್ ಅಧ್ಯಕ್ಷರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ.ಆಂಥೋನಿ ಪೌಸಿ ಮಾಹಿತಿ ನೀಡಿದ್ದಾರೆ. ನ.22 ರಂದು ದಕ್ಷಿಣ ಆಫ್ರಿಕಾದಿಂದ ಬಂದಿದ್ದ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿತ್ತು. ಸೋಂಕಿತ ಸ್ವಯಂ ಕ್ವಾರಂಟೈನ್ ಆಗಿದ್ದಾರೆ. ಇವರ ಸಂಪರ್ಕಿತರ ವರದಿ ನೆಗೆಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಅಮೆರಿಕಾದಲ್ಲಿ ಒಮಿಕ್ರೋನ್ ಕಂಡುಬಂದ ಬೆನ್ನಲ್ಲೆ ಶ್ವೇತ ಭವನ ಪ್ರಕಟಣೆ ಹೊರಡಿಸಿದ್ದು, ದೇಶವಾಸಿಗಳು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದೆ.ಒಮಿಕ್ರೋನ್ ರೂಪಾಂತರಿ ವಿಶ್ವದಾದ್ಯಂತ ಭೀತಿ ಮೂಡಿಸಿದ್ದು, ಈ ಸೋಂಕು ಹರಡುವುದನ್ನು ತಡೆಯಲು ಎಲ್ಲ ದೇಶಗಳು ಕಠಿಣ ಕ್ರಮ ಕೈಗೊಳ್ಳುತ್ತಿವೆ.

ಡಿಸೆಂಬರ್ ನಿಂದ ಫೆಬ್ರವರಿವರೆಗೆ ಕರ್ನಾಟಕ ಸೇರಿದಂತೆ ಈ 6 ರಾಜ್ಯಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24