Featured

ಅಮೇಥಿಯಲ್ಲಿ ರಾಹುಲ್ ಗಾಂಧಿಯನ್ನು ಸೋಲಿಸಲು ಮತ್ತೆ ಸ್ಮೃತಿ ಇರಾನಿ ಕಣಕ್ಕೆ – Vishwanews24

ಅಮೇಥಿ: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸತತ ಎರಡನೇ ಬಾರಿಗೆ ಅಮೇಥಿಯಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.

2014ರ ಚುನಾವಣೆಯಂತೆಯೇ ಈ ಬಾರಿಯ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅಮೇಥಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಸೆಣಸುತ್ತಿದ್ದಾರೆ. ಕಳೆದ ಬಾರಿ ಅವರು ಇದೇ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಅನುಭವಿಸಿದ್ದರು.

ಕಳೆದ ಚುನಾವಣೆಯಲ್ಲಿ ಸ್ಮೃತಿ ಅವರು ರಾಹುಲ್ ಗಾಂಧಿ ವಿರುದ್ಧ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲನ್ನಪ್ಪಿದ್ದರು. ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿ ಈ ಬಾರಿಯೂ ಸಹ ಸ್ಮೃತಿ ಅವರಿಗೆ ಇದೇ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದ್ದು, ರಾಹುಲ್ ಗಾಂಧಿ ಅವರನ್ನು ಕಟ್ಟಿಹಾಕುವ ಯೋಜನೆ ರೂಪಿಸಿದೆ.

ಬಿಜೆಪಿ ಬಿಡುಗಡೆ ಮಾಡಿರುವ 188 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶದ ರಾಜ್ಯದ 28 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಅದರಲ್ಲಿ ನರೇಂದ್ರ ಮೋದಿ ಈ ಹಿಂದಿನಂತೆಯೇ ಈ ಬಾರಿಯೂ ವಾರಣಾಸಿಯಿಂದಲೇ ಸ್ಪರ್ಧೆ ಮಾಡುತ್ತಿದ್ದಾರೆ. ಎಲ್ ಕೆ ಅಡ್ವಾಣಿ ಅವರ ಗಾಂಧಿನಗರ ಕ್ಷೇತ್ರವನ್ನು ಈ ಬಾರಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ನೀಡಲಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago