Featured

ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ : 178 ಪ್ರಯಾಣಿಕರ ಸುರಕ್ಷಿತ ಲ್ಯಾಂಡಿಂಗ್‌ – vishwanews24

ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ – 178 ಪ್ರಯಾಣಿಕರ ಸುರಕ್ಷಿತ ಲ್ಯಾಂಡಿಂಗ್‌

ಡೆನ್ವರ್ : ಗುರುವಾರ ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಲ್ಲಾಸ್‌ಗೆ ತೆರಳುತ್ತಿದ್ದ ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿ ಆರು ಸಿಬ್ಬಂದಿ ಸೇರಿದಂತೆ 178 ಜನರು ಇದ್ದರು ಎನ್ನಲಾಗಿದೆ.

ಅಮೇರಿಕನ್ ಏರ್ಲೈನ್ಸ್ ನ ಬೋಯಿಂಗ್ 737-800 ವಿಮಾನ ಸಂಖ್ಯೆ 1006, ಕೊಲೊರಾಡೋ ಸ್ಪ್ರಿಂಗ್ಸ್ ನಿಂದ ಹೊರಟು ಡಲ್ಲಾಸ್ ಫೋರ್ಟ್ ವರ್ತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ವಿಮಾನವನ್ನು ಡೆನ್ವರ್ ಗೆ ತಿರುಗಿಸಲಾಯಿತು ಎಂದು ವಿಮಾನಯಾನ ವಕ್ತಾರರು ತಿಳಿಸಿದ್ದಾರೆ. ಲ್ಯಾಂಡ್‌ ಆಗುತ್ತಿದ್ದಂತೆ ವಿಮಾನದಲ್ಲಿ ಬೆಂಕಿ ಹೆಚ್ಚಾಗಿದೆ. ಅಲ್ಲದೇ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ವಿಮಾನ ನಿಲ್ದಾಣದ ಸಿಬ್ಬಂದಿ ವಿಮಾನದಲ್ಲಿದ್ದ 6 ಸಿಬ್ಬಂದಿ ಸೇರಿದಂತೆ, 178 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ ಎನ್ನಲಾಗಿದೆ.

ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಆದರೆ 12 ಜನರನ್ನು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು ಎಂದು ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ. ಸ್ಥಳಾಂತರಿಸುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ವಿಮಾನವು ಲ್ಯಾಂಡಿಂಗ್ ನಂತರ ಗೇಟ್ ಕಡೆಗೆ ಚಲಿಸುತ್ತಿತ್ತು ಮತ್ತು “ಎಂಜಿನ್ ಸಂಬಂಧಿತ ಸಮಸ್ಯೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago