ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ ದೇಣಿಗೆ ಹಾಗೂ ಬೆಲೆ ಬಾಳುವ ವಸ್ತುಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ 8 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅವರನ್ನೆಲ್ಲ ಬಂಧಿಸಲಾಗಿದೆ ಎಂದು ಶುಕ್ರವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳನ್ನು ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು, ಲವಕುಶ ಮಿಶ್ರ, ಅನುಕಲ್ಪ್ ಮಿಶ್ರ, ಅವಿನಾಶ್ ಶುಕ್ಲಾ, ಮನೀಶ್ ಯಾದವ್, ರಾಮಶಂಕರ್ ಮಿಶ್ರಾಲ, ಸುಭಾಷ್ ಚಂದ್ರ ಶ್ರೀ ವಾಸ್ತವ ಹಾಗೂ ಕರುಣೇಶ್ ಪಾಂಡೆ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ :
ರಾಮ ಮಂದಿರದ ದೇಣಿಗೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪಗಳ ಕುರಿತು ತನಿಖೆಗಾಗಿ ನೇಮಕಗೊಂಡಿದ್ದ ಮೂವರು ಸದಸ್ಯರ ವಿಶೇಷ ತನಿಖಾ ತಂಡ ತನ್ನ ಪ್ರಾಥಮಿಕ ವರದಿಯನ್ನು ಉತ್ತರ ಪ್ರದೇಶ ಸರಕಾರಕ್ಕೆ ಸಲ್ಲಿಸಿದ ಬೆನ್ನಿಗೇ ಈ ಬಂಧನ ನಡೆದಿದೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೊಂದಿಗೆ ಸಂಬಂಧ ಹೊಂದಿರುವ ಕೃಷ್ಣ ಮೋಹನ್ ಎಂಬವರು ನೀಡಿದ ದೂರನ್ನು ಆಧರಿಸಿ ಗುರುವಾರ ಸಂಜೆ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
“ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲಾಗಿದ್ದು, ಮ್ಯಾಜಿಸ್ಟ್ರೇಟ್ ಎದುರು ಅವರನ್ನೆಲ್ಲ ಹಾಜರುಪಡಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ :
ಆದರೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಟ್ರಸ್ಟ್ ಸದಸ್ಯ ಡಾ. ಅನಿಲ್ ಮಿಶ್ರಾಮ, ದೇವಾಲಯ ನಿರ್ಮಾಣ ಉಸ್ತುವಾರಿ ಗೋಪಾಲ್ ರಾವ್ ಅವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೊಳಪಡಿಸಿದರೂ ಅವರ ಹೆಸರುಗಳು ಎಫ್ಐಆರ್ ನಲ್ಲಿ ಸೇರ್ಪಡೆಯಾಗಿಲ್ಲ ಎಂದು ವರದಿಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…