ಅಯೋಧ್ಯೆ (Vishwanews24): ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಪವಿತ್ರ ಇಟ್ಟಿಗೆ ತರಲಾಗಿದೆ.
ರಾಮಜನ್ಮಭೂಮಿ ವಿವಾದದಲ್ಲಿ ಸುಪ್ರಿಂ ಕೋರ್ಟ್ ಆದೇಶದಂತೆ ಮುಸ್ಲಿಮರಿಗೆ ಪರಿಹಾರವಾಗಿ ಅಯೋಧ್ಯೆಯಲ್ಲಿ ಭೂಮಿಯನ್ನು ನೀಡಲಾಗಿತ್ತು. ಇದೀಗ ಈ ಭೂಮಿಯಲ್ಲಿ ಹೊಸ ಮಸೀದಿ ನಿರ್ಮಾಣ ಮಾಡಲಾಗುತ್ತಿದ್ದು, ಈ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟ ಇಟ್ಟಿಗೆಯನ್ನು ತರಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಇಂಡೋ-ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಶನ್ (ಐಐಸಿಎಫ್) ಪದಾಧಿಕಾರಿಗಳು, ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟ ಇಟ್ಟಿಗೆಯನ್ನು ಕಪ್ಪು ಮಣ್ಣಿನಿಂದ ಮಾಡಲಾಗಿದೆ. ಈ ಇಟ್ಟಿಗೆಯನ್ನು ಚಿನ್ನದಲ್ಲಿ ಕೆತ್ತಿ ಕುರಾನ್ ನ ಕೆಲ ಉಪದೇಶಗಳನ್ನು ಹೊಂದಿದೆ. ಈ ಪವಿತ್ರ ಇಟ್ಟಿಗೆಯನ್ನು ಮಾ. 12 ರಂದು ರಂಜಾನ್ ಈದ್ ಬಳಿಕ ಅಯೋಧ್ಯೆಯ ಮಸೀದಿ ಸ್ಥಳವಿರುವ ಧನ್ನಿಪುರ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಐಐಸಿಎಫ್ ಸದಸ್ಯ ಮತ್ತು ಮಸೀದಿ ಅಭಿವೃದ್ಧಿ ಸಮಿತಿಯ ಮುಖ್ಯ ಸ್ಥಹಾಜಿ ಅರಾಫತ್ ಶೇಕ್ ಅವರು, ಮಹಾರಾಷ್ಟ್ರದಿಂದ ಇಟ್ಟಿಗೆಯನ್ನು ಮೆಕ್ಕಾಗೆ ತೆಗೆದುಕೊಂಡು ಹೋಗಲಾಗಿದೆ. ಅಲ್ಲಿ ಮೆಕ್ಕಾದ ಪವಿತ್ರ ನೀರಿನಿಂದ ಪ್ರೋಕ್ಷಣೆ ಮಾಡಿದ್ದೇನೆ. ಬಳಿಕ ಇಟ್ಟಿಗೆಯನ್ನು ಮದೀನಾ ಶರೀಫ್ ದರ್ಗಾಗೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿನ ಪವಿತ್ರ ನೀರಿನಿಂದ ಪ್ರೋಕ್ಷಣೆ ಮಾಡಿ ಪ್ರಾರ್ಥನೆ ಸಲ್ಲಿಸಿ ಫೆ.2 ರಂದು ಪವಿತ್ರ ಇಟ್ಟಿಗೆಯನ್ನು ಮಹಾರಾಷ್ಟ್ರಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಅಜ್ಮೇರ್ ಶರೀಫ್ ದರ್ಗಾದಲ್ಲಿ ಪವಿತ್ರ ಇಟ್ಟಿಗೆಗೆ ಪ್ರಾರ್ಥನೆ ಸಲ್ಲಿಸಲಾಗುವುದು. ಬಳಿಕ ಅಲ್ಲಿಂದ ಮೆರವಣಿಗೆ ಮೂಲಕ ಅಯೋಧ್ಯೆಗೆ ತರಲಾಗುವುದು. ಈ ಇಟ್ಟಿಗೆಯನ್ನು ಅಯೋಧ್ಯೆಯಲ್ಲಿ ನಿರ್ಮಾಣವಾಗುವ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿಯ ಅಡಿಪಾಯಕ್ಕೆ ಬಳಸಲಾಗುತ್ತದೆ. ಏಪ್ರಿಲ್ ನಲ್ಲಿ ಮಸೀದಿ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…