Featured

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಬಂದ ಪವಿತ್ರ ಇಟ್ಟಿಗೆ – Vishwanews24

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಬಂದ ಪವಿತ್ರ ಇಟ್ಟಿಗೆ

ಅಯೋಧ್ಯೆ (Vishwanews24): ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಪವಿತ್ರ ಇಟ್ಟಿಗೆ ತರಲಾಗಿದೆ.

ರಾಮಜನ್ಮಭೂಮಿ ವಿವಾದದಲ್ಲಿ ಸುಪ್ರಿಂ ಕೋರ್ಟ್ ಆದೇಶದಂತೆ ಮುಸ್ಲಿಮರಿಗೆ ಪರಿಹಾರವಾಗಿ ಅಯೋಧ್ಯೆಯಲ್ಲಿ ಭೂಮಿಯನ್ನು ನೀಡಲಾಗಿತ್ತು. ಇದೀಗ ಈ ಭೂಮಿಯಲ್ಲಿ ಹೊಸ ಮಸೀದಿ ನಿರ್ಮಾಣ ಮಾಡಲಾಗುತ್ತಿದ್ದು, ಈ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟ ಇಟ್ಟಿಗೆಯನ್ನು ತರಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಇಂಡೋ-ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಶನ್ (ಐಐಸಿಎಫ್) ಪದಾಧಿಕಾರಿಗಳು, ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟ ಇಟ್ಟಿಗೆಯನ್ನು ಕಪ್ಪು ಮಣ್ಣಿನಿಂದ ಮಾಡಲಾಗಿದೆ. ಈ ಇಟ್ಟಿಗೆಯನ್ನು ಚಿನ್ನದಲ್ಲಿ ಕೆತ್ತಿ ಕುರಾನ್ ನ ಕೆಲ ಉಪದೇಶಗಳನ್ನು ಹೊಂದಿದೆ. ಈ ಪವಿತ್ರ ಇಟ್ಟಿಗೆಯನ್ನು ಮಾ. 12 ರಂದು ರಂಜಾನ್ ಈದ್ ಬಳಿಕ ಅಯೋಧ್ಯೆಯ ಮಸೀದಿ ಸ್ಥಳವಿರುವ ಧನ್ನಿಪುರ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಐಐಸಿಎಫ್ ಸದಸ್ಯ ಮತ್ತು ಮಸೀದಿ ಅಭಿವೃದ್ಧಿ ಸಮಿತಿಯ ಮುಖ್ಯ ಸ್ಥಹಾಜಿ ಅರಾಫತ್ ಶೇಕ್ ಅವರು, ಮಹಾರಾಷ್ಟ್ರದಿಂದ ಇಟ್ಟಿಗೆಯನ್ನು ಮೆಕ್ಕಾಗೆ ತೆಗೆದುಕೊಂಡು ಹೋಗಲಾಗಿದೆ. ಅಲ್ಲಿ ಮೆಕ್ಕಾದ ಪವಿತ್ರ ನೀರಿನಿಂದ ಪ್ರೋಕ್ಷಣೆ ಮಾಡಿದ್ದೇನೆ. ಬಳಿಕ ಇಟ್ಟಿಗೆಯನ್ನು ಮದೀನಾ ಶರೀಫ್ ದರ್ಗಾಗೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿನ ಪವಿತ್ರ ನೀರಿನಿಂದ ಪ್ರೋಕ್ಷಣೆ ಮಾಡಿ ಪ್ರಾರ್ಥನೆ ಸಲ್ಲಿಸಿ ಫೆ.2 ರಂದು ಪವಿತ್ರ ಇಟ್ಟಿಗೆಯನ್ನು ಮಹಾರಾಷ್ಟ್ರಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಅಜ್ಮೇರ್ ಶರೀಫ್ ದರ್ಗಾದಲ್ಲಿ ಪವಿತ್ರ ಇಟ್ಟಿಗೆಗೆ ಪ್ರಾರ್ಥನೆ ಸಲ್ಲಿಸಲಾಗುವುದು. ಬಳಿಕ ಅಲ್ಲಿಂದ ಮೆರವಣಿಗೆ ಮೂಲಕ ಅಯೋಧ್ಯೆಗೆ ತರಲಾಗುವುದು. ಈ ಇಟ್ಟಿಗೆಯನ್ನು ಅಯೋಧ್ಯೆಯಲ್ಲಿ ನಿರ್ಮಾಣವಾಗುವ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿಯ ಅಡಿಪಾಯಕ್ಕೆ ಬಳಸಲಾಗುತ್ತದೆ. ಏಪ್ರಿಲ್‌ ನಲ್ಲಿ ಮಸೀದಿ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

18 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

21 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

21 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

21 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

21 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

22 hours ago