Featured

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ : ಭಕ್ತರಿಂದ ಮೂರೇ ದಿನಗಳಲ್ಲಿ 100 ಕೋಟಿ ಹಣ ಸಂಗ್ರಹ -Vishwanews24

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ : ಭಕ್ತರಿಂದ ಮೂರೇ ದಿನಗಳಲ್ಲಿ 100 ಕೋಟಿ ಹಣ ಸಂಗ್ರಹ -Vishwanews24

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಭವ್ಯ ರಾಮಮಂದಿರಕ್ಕೆ ಭಕ್ತರಿಂದ ಭರ್ಜರಿಯಾಗಿ ದೇಣಿಗೆ ಹರಿದು ಬರಲಾರಂಭಿಸಿದೆ. ದೇಣಿಗೆ ಸಂಗ್ರಹ ಆರಂಭವಾದ ಮೂರೇ ದಿನಗಳಲ್ಲಿ ಅಂದಾಜು 100 ಕೋಟಿ ರು. ಹಣ ಸಂಗ್ರಹವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ತಿಳಿಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿರುವ ರಾಯ್‌ ‘ದೇಶದ ವಿವಿಧೆಡೆ ಸಂಗ್ರಹವಾದ ಹಣ ಇನ್ನೂ ಪೂರ್ಣ ಪ್ರಮಾಣದಲ್ಲಿ ಟ್ರಸ್ಟ್‌ನ ಕೇಂದ್ರ ಕಚೇರಿ ತಲುಪಿಲ್ಲ. ಆದರೆ ನಮ್ಮ ಕಾರ್ಯಕರ್ತರು ನೀಡಿರುವ ಮಾಹಿತಿ ಅನ್ವಯ ಈವರೆಗೆ 100 ಕೋಟಿ ರು. ಆಸುಪಾಸಿನಷ್ಟುಹಣ ಸಂಗ್ರಹವಾಗಿದೆ’ ಎಂದಿದ್ದಾರೆ.

ಸಂಪೂರ್ಣವಾಗಿ ಭಕ್ತರ ದೇಣಿಗೆ ಹಣದಿಂದಲೇ ರಾಮಮಂದಿರ ದೇಗುಲ ಮತ್ತು ದೇಗುಲ ಸಂಕೀರ್ಣವನ್ನು ನಿರ್ಮಿಸುವ ಉದ್ದೇಶವನ್ನು ಟ್ರಸ್ಟ್‌ ಹೊಂದಿದೆ. ಇದಕ್ಕಾಗಿ ಸಂಕ್ರಾತಿ ದಿನವಾದ ಜ.14ರಿಂದ ಫೆ.27ರವರೆಗೆ ದೇಶವ್ಯಾಪಿ ದೇಣಿಗೆ ಸಂಗ್ರಹದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಮಮಂದಿರಕ್ಕೆ 300-400 ಕೋಟಿ ರು. ಮತ್ತು ಒಟ್ಟಾರೆ ರಾಮಮಂದಿರ ಸಂಕೀರ್ಣಕ್ಕೆ 1100 ಕೋಟಿ ರು. ವೆಚ್ಚವಾಗುವ ಸಾಧ್ಯತೆ ಇದೆ ಎಂದು ಟ್ರಸ್ಟ್‌ ಅಂದಾಜಿಸಿದೆ.

ಈಗಾಗಲೇ ರಾಷ್ಟ್ರಪತಿ ರಾಮನಾಥ್​​ ಕೋವಿಂದ್ 5 ಲಕ್ಷ ರೂ, ಪೇಜಾವರ ಸ್ವಾಮೀಜಿ, ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥಸ್ವಾಮೀಜಿ, ಧರ್ಮಸ್ಥಳ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ, ಶೃಂಗೇರಿ ಸ್ವಾಮೀಜಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ರಾಮಮಂದಿರಕ್ಕೆ ದೇಣಿಗೆ ಸಮರ್ಪಣೆ ಮಾಡಿದ್ದಾರೆ. ಇದಲ್ಲದೇ ಬಿಜೆಪಿ, ಹಿಂದೂ ಸಂಘಟನೆಗಳು ಕೂಡಾ ಸಾರ್ವಜನಿಕರಿಂದ ನಿಧಿ ಸಂಗ್ರಹಿಸಿ ರಾಮಮಂದಿರ ನಿರ್ಮಾಣ ಟ್ರಸ್ಟ್​ಗೆ ಸಲ್ಲಿಕೆ ಮಾಡುತ್ತಿವೆ.

ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಚಾಲನೆ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

10 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

10 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

10 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

11 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

15 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

15 hours ago