Featured

ಅಯೋಧ್ಯೆಯಲ್ಲಿ ರಾಮನ ದರ್ಶನದ  ಸಮಯದಲ್ಲಿ ತಮಗಾದ ವಿಶೇಷ ಅನುಭವದ ಬಗ್ಗೆ ತಿಳಿಸಿದ  ರಕ್ಷಿತ್ ಶೆಟ್ಟಿ- Vishwanews24

ಬೇರಾವ ವಿಗ್ರಹದ ಮುಂದೆ ಅರ್ಧಗಂಟೆ ಕೂತವನಲ್ಲ ನಾನು  : ಅಯೋಧ್ಯೆಯಲ್ಲಿ ರಕ್ಷಿತ್‌ ಶೆಟ್ಟಿ

ಅಯೋಧ್ಯೆ: ರಾಮನ ಮೂರ್ತಿಯ ಮುಂದೆ ಸುಮಾರು ಅರ್ಧ ತಾಸು ನಾನು ಕುಳಿತಿದ್ದೆ. ಹೀಗೆ ಇಷ್ಟು ಸಮಯ ನಾನು ಯಾವ ಮೂರ್ತಿಯ ಮುಂದೆಯೂ ಕೂತಿದ್ದಿಲ್ಲ. ಆದರೆ ಈ ಅನುಭವ ಭಿನ್ನವಾಗಿತ್ತು ಎಂದು ನಟ ನಿರ್ದೇಶಕ ರಕ್ಷಿತ್ ಶೆಟ್ಟಿ ಅಯೋಧ್ಯೆಯಲ್ಲಿ ತಮಗಾದ ಅನುಭವವನ್ನು ತಿಳಿಸಿದ್ದಾರೆ.

ರಕ್ಷಿತ್ ಶೆಟ್ಟಿ ಇತ್ತೀಚೆಗೆ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಮಾಡಿದ್ದಾರೆ. ರಾಮನ ದರ್ಶನ ಮಾಡುವ ಸಮಯದಲ್ಲಿ ತಮಗಾದ ವಿಶೇಷ ಅನುಭೂತಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಪ್ರಾಣ ಪ್ರತಿಷ್ಠೆ ಆದಾಗಿನಿಂದಲೂ ರಾಮನನ್ನು ನೇರವಾಗಿ ನೋಡಲು ಕಾತರನಾಗಿದ್ದೆ. ಪ್ರಾಣ ಪ್ರತಿಷ್ಠೆಯ ದಿನದಿಂದಲೂ ರಾಮನ ಕಣ್ಣುಗಳು ನನ್ನನ್ನು ಬಹುವಾಗಿ ಸೆಳೆದಿದ್ದವು. ಆ ಕಣ್ಣುಗಳು ನಿಜವಾದ ಕಣ್ಣುಗಳೇ ಎಂದು ನನಗೆ ಪದೇ ಪದೇ ಅನ್ನಿಸಿತ್ತು. ಅದೆಷ್ಟೋ ಬಾರಿ ಚಿತ್ರಗಳನ್ನು ಜೂಮ್ ಮಾಡಿ ಮಾಡಿ ನೋಡಿದ್ದೆ. ‘ಇಂದು ನಾನು ಗಮನಿಸಿದಂತೆ ಕಣ್ಣುಗಳ ಆ ತೇಜತೆಯನ್ನು ಮೂರ್ತಿ ಸ್ವತಃ ತಾನೇ ಆವಾಹಿಸಿಕೊಂಡಿದೆಯೇನೋ ಎನ್ನಿಸಿತು. ಕಣ್ಣುಗಳಿಗೆ ಆ ತೇಜಸ್ಸು ಪ್ರಾಪ್ತವಾಗಲು ಕಣ್ಣಿನ ಬಿಳಿಯ ಭಾಗವನ್ನು ಭಿನ್ನವಾದ ಕುಸುರಿ ಕೆಲಸ ಮಾಡಲಾಗಿದೆ ಎಂದು ನಾನು ಅರಿತುಕೊಂಡೆ’

ಇಂದು ಕೊನೆಗೂ ನಾನು ಹತ್ತಿರದಿಂದ ರಾಮನ ಮೂರ್ತಿಯನ್ನು ಕಂಡೆ. ಬಹಳ ಕಡಿಮೆ ಮಂದಿಗೆ ಅಷ್ಟು ಹತ್ತಿರದಿಂದ ರಾಮನನ್ನು ಕಣ್ಣು ತುಂಬಿಸಿಕೊಳ್ಳುವ ಅದೃಷ್ಟ ಪ್ರಾಪ್ತವಾಗುತ್ತದೆ. ರಾಮನ ಮೂರ್ತಿಯ ಮುಂದೆ ಸುಮಾರು ಅರ್ಧ ತಾಸು ನಾನು ಕುಳಿತಿದ್ದೆ. ಹೀಗೆ ಇಷ್ಟು ಸಮಯ ನಾನು ಯಾವ ಮೂರ್ತಿಯ ಮುಂದೆಯೂ ಕೂತಿದ್ದಿಲ್ಲ. ಆದರೆ ಈ ಅನುಭವ ಭಿನ್ನವಾಗಿತ್ತು. ಸಾಮಾನ್ಯವಾಗಿ ಎಲ್ಲ ಮೂರ್ತಿ ಕೆತ್ತನೆಗಳನ್ನು ನಾನು ಶ್ಲಾಘಿಸುತ್ತೇನೆ. ಆದರೆ ಈ ಮೂರ್ತಿಯ ಕುಸುರಿ ಅದ್ಭುತ. ಇದು ಸಾಮಾನ್ಯವಲ್ಲ. ರಾಮನೆಂದರೆ ಹಾಗೆಯೇ ಎನಿಸುತ್ತದೆ ಎಂದು ಬರೆದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

6 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

7 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

7 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

7 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

7 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

7 days ago