ಹೈದರಾಬಾದ್ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಚಿನ್ನದ ಇಟ್ಟಿಗೆ ನೀಡುವುದಾಗಿ ಮೊಘಲ್ ಸಾಮ್ರಾಜ್ಯದ ಕೊನೆಯ ದೊರೆಯ ಆರನೇ ಪೀಳಿಗೆಯ ವಂಶಸ್ಥರೊಬ್ಬರು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರವಿದ್ದ ಜಾಗದಲ್ಲಿ ಮಸೀದಿ ನಿರ್ಮಿಸಿದ್ದು, ಮೊಘಲರ ಮೊದಲ ದೊರೆ ಬಾಬರ್, ಮೊಘಲ್ ಸಾಮ್ರಾಜ್ಯದ ಕೊನೆಯ ದೊರೆ ಬಹಾದ್ದೂರ್ ಷಾ ಜಾಫರ್. ಅವನ 6 ನೇ ಪೀಳಿಗೆಯ ವಂಶಸ್ಥರಾಗಿರುವ ಹಬೀಬುದ್ದೀನ್ ಟ್ಯೂಸಿ ಈಗ ಹೈದರಾಬಾದ್ ನಲ್ಲಿ ವಾಸವಾಗಿದ್ದಾರೆ.
ರಾಮ ಜನ್ಮಭೂಮಿ ಭೂ ವಿವಾದ ಆಲಿಸುತ್ತಿರುವ ಸುಪ್ರೀಂಕೋರ್ಟ್ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಟ್ಯೂಸಿ ಈ ಕೊಡುಗೆ ಪ್ರಕಟಿಸಿದ್ದಾರೆ. ಟ್ಯೂಸಿ ಕಳೆದ ವರ್ಷದ ಸೆಪ್ಟೆಂಬರ್ ನಲ್ಲೂ ಇದೇ ರೀತಿ ಪ್ರಕಟಿಸಿದ್ದರು. ಈ ಬಾರಿ ಸುಪ್ರೀಂಕೋರ್ಟ್ ಮುಂದೆಯೇ ಅರ್ಜಿ ಸಲ್ಲಿಸಿದ್ದಾರೆ.
ಒಂದು ಸುಪ್ರೀಂಕೋರ್ಟ್ ನನಗೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಸ್ಥಳವನ್ನು ನನಗೆ ಹಸ್ತಾಂತರಿಸಿದರೆ. ರಾಮಮಂದಿರ ನಿರ್ಮಿಸಲು ನಾನು ಇಡೀ ಜಾಗವನ್ನು ದಾನವಾಗಿ ನೀಡುವುದಾಗಿ ಘೋಷಿಸಿದ್ದಾರೆ.
ವಿವಾದಿತ ಜಾಗಕ್ಕೆ ಸಂಬಂಧಿಸಿ ಯಾರಲ್ಲೂ ದಾಖಲೆಗಳಿಲ್ಲ. ಆದರೆ ತಾವು ಮೊಘಲ್ ವಂಶಸ್ಥನಾಗಿರುವುದರಿಂದ ಆ ಜಾಗದ ಮೇಲೆ ಹಕ್ಕಿದೆ. ಹೀಗಾಗಿ ಹೆಚ್ಚಿನ ಗೊಂದಲಕ್ಕೆ ಅವಕಾಶವಿಲ್ಲದಂತೆ ವಿವಾದಿತ ಜಾಗವನ್ನು ನಮ್ಮ ಹೆಸರಿಗೆ ಹಸ್ತಾಂತರಿಸಬೇಕು ಎನ್ನುವುದು ಟ್ಯೂಸಿ ವಾದ. ಹಾಗೆ ಸುಪ್ರೀಂಕೋರ್ಟ್ ತಮ್ಮ ಹೆಸರಿಗೆ ಜಾಗ ನೀಡಿದರೆ ಮಂದಿರ ಕಟ್ಟಲು ಜಾಗ ನೀಡುವುದಾಗಿ ಟ್ಯೂಸಿ ಹೇಳುತ್ತಾರೆ. ಬಾಬರಿ ಮಸೀದಿ ನಿರ್ಮಾಣವಾಗಿದ್ದು ಸೇನೆಯ ನಮಾಜ್‌ಗಾಗಿ ಮಾತ್ರ. ಅಲ್ಲಿ ಮೊದಲು ಏನಿತ್ತು ಎನ್ನುವ ವಿಚಾರಕ್ಕೆ ನಾನು ಹೋಗುವುದಿಲ್ಲ. ಒಬ್ಬ ನೈಜ ಮುಸ್ಲಿಮನಾಗಿ ಅವರ ಭಾವನೆಗಳನ್ನು ಗೌರವಿಸಿ ಜಾಗ ಬಿಟ್ಟುಕೊಡುತ್ತೇನೆ ಎನ್ನುತ್ತಾರೆ ಟ್ಯೂಸಿ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…