Featured

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ, ಇದು ನಿಜವಾದ ಗೋಕುಲಾಷ್ಟಮಿಯಾಗಿದೆ : ವಿನಯ್‌ ಗುರೂಜಿ -Vishwanews24

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ, ಇದು ನಿಜವಾದ ಗೋಕುಲಾಷ್ಟಮಿಯಾಗಿದೆ : ವಿನಯ್‌ ಗುರೂಜಿ -Vishwanews24

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ, ಇದು ನಿಜವಾದ ಗೋಕುಲಾಷ್ಟಮಿಯಾಗಿದೆ  ಎಂದು ಮಹಾತ್ಮಗಾಂಧಿ ಸೇವಾ ಟ್ರಸ್ಟ್‌ ಸಂಸ್ಥಾಪಕ ವಿನಯ್‌ ಗುರೂಜಿ ಹೇಳಿದರು.

ಕೋಮುಗಲಭೆಗಳನ್ನು ನಿಯಂತ್ರಿಸಲು ಮತ್ತು ಜನರಲ್ಲಿ ಧರ್ಮಗ್ರಂಥಗಳ ಅರಿವು ಮೂಡಿಸುವುದಕ್ಕಾಗಿ ರಾಜ್ಯ ಸರ್ಕಾರವು ಶಾಲಾ ಪಠ್ಯದಲ್ಲಿ ಎಲ್ಲಾ ಧರ್ಮಗ್ರಂಥಗಳನ್ನು ಕುರಿತ ಪಾಠಗಳನ್ನು ಅಳವಡಿಸುವಂತೆ  ವಿನಯ್‌ ಗುರೂಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಗುರೂಜಿ ಅವರು ಗುರುವಾರ ಗೋವಿನ ಪೂಜೆ ನೆರವೇರಿಸಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಧರ್ಮಗ್ರಂಥಗಳನ್ನು ಅಳವಡಿಸುವುದರಿಂದ ಧರ್ಮದ ಬಗ್ಗೆ ಜನರಿಗೆ ಇರುವ ತಪ್ಪು ಕಲ್ಪನೆಗಳು ನಿವಾರಣೆಯಾಗಲಿವೆ ಮತ್ತು ಧರ್ಮದ ಕುರಿತು ಅರಿವು ಮೂಡಲಿದೆ. ಇದರ ಜೊತೆಗೆ ಸನಾತನ ಭಾರತದ ಸಂಸ್ಕಾರ ಕೂಡ ಮುಂದಿನ ಪೀಳಿಗೆಗೆ ತಲುಪಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಪ್ರತಿ ತಾಲೂಕು ಕೇಂದ್ರಗಳಲ್ಲಿ ಗೋ ಶಾಲೆ ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳು ನಿರ್ಮಾಣ ಆಗಬೇಕು. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವುದರಿಂದ ಪ್ರತಿ ಜಿಲ್ಲೆಯಲ್ಲಿ ಗೋ ಸಂರಕ್ಷಣಾ ಕೇಂದ್ರ ಸ್ಥಾಪನೆ ಮಾಡಬೇಕು. ಇದರಿಂದ ಸ್ಥಳೀಯವಾಗಿ ಜನರಿಗೆ ಉದ್ಯೋಗ ಸಿಗಲಿದೆ ಮತ್ತು ಗೋ ಉತ್ಪನ್ನಗಳ ಸಂಶೋಧನೆ ನಡೆಸಲು ಸಹಕಾರಿಯಾಗಲಿದೆ ಎಂದರು.

ಕಾಯ್ದೆ ಜಾರಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಕೋಟ್ಯಂತರ ಹಿಂದೂಗಳು ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ. ಇದು ನಿಜವಾದ ಗೋಕುಲಾಷ್ಟಮಿಯಾಗಿದೆ ಎಂದು ಹೇಳಿದರು.

ಕಳೆದ ಆರು ತಿಂಗಳ ಹಿಂದೆ ಅಗ್ನಿಹೋತ್ರ ಮಾಡಿದರೆ ಕೊರೋನಾ ಸೋಂಕು ಹರಡುವುದಿಲ್ಲ ಎಂದು ಸಲಹೆ ನೀಡಿದಾಗ ನಗೆಪಾಟಲಿಗೆ ಈಡಾಗಿದ್ದೆ. ಇಂದು ಕನಿಷ್ಠ ಐದು ಸಾವಿರ ಜನ ಅಗ್ನಿಹೋತ್ರ ಮಾಡುತ್ತಿದ್ದಾರೆ. ಅವರ ಕುಟುಂಬದ ಯಾವೊಬ್ಬ ಸದಸ್ಯರಿಗೂ ಕೊರೋನಾ ಬಂದಿಲ್ಲ. ಇದರಿಂದ ಗೋವಿನಲ್ಲಿರುವ ಶಕ್ತಿ ಎಂಥದ್ದು ಎಂದು ತಿಳಿಯುತ್ತದೆ ಎಂದರು.

 

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

2 minutes ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

8 minutes ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

33 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

41 minutes ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

46 minutes ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago