ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ, ಇದು ನಿಜವಾದ ಗೋಕುಲಾಷ್ಟಮಿಯಾಗಿದೆ ಎಂದು ಮಹಾತ್ಮಗಾಂಧಿ ಸೇವಾ ಟ್ರಸ್ಟ್ ಸಂಸ್ಥಾಪಕ ವಿನಯ್ ಗುರೂಜಿ ಹೇಳಿದರು.
ಕೋಮುಗಲಭೆಗಳನ್ನು ನಿಯಂತ್ರಿಸಲು ಮತ್ತು ಜನರಲ್ಲಿ ಧರ್ಮಗ್ರಂಥಗಳ ಅರಿವು ಮೂಡಿಸುವುದಕ್ಕಾಗಿ ರಾಜ್ಯ ಸರ್ಕಾರವು ಶಾಲಾ ಪಠ್ಯದಲ್ಲಿ ಎಲ್ಲಾ ಧರ್ಮಗ್ರಂಥಗಳನ್ನು ಕುರಿತ ಪಾಠಗಳನ್ನು ಅಳವಡಿಸುವಂತೆ ವಿನಯ್ ಗುರೂಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಗುರೂಜಿ ಅವರು ಗುರುವಾರ ಗೋವಿನ ಪೂಜೆ ನೆರವೇರಿಸಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಧರ್ಮಗ್ರಂಥಗಳನ್ನು ಅಳವಡಿಸುವುದರಿಂದ ಧರ್ಮದ ಬಗ್ಗೆ ಜನರಿಗೆ ಇರುವ ತಪ್ಪು ಕಲ್ಪನೆಗಳು ನಿವಾರಣೆಯಾಗಲಿವೆ ಮತ್ತು ಧರ್ಮದ ಕುರಿತು ಅರಿವು ಮೂಡಲಿದೆ. ಇದರ ಜೊತೆಗೆ ಸನಾತನ ಭಾರತದ ಸಂಸ್ಕಾರ ಕೂಡ ಮುಂದಿನ ಪೀಳಿಗೆಗೆ ತಲುಪಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಪ್ರತಿ ತಾಲೂಕು ಕೇಂದ್ರಗಳಲ್ಲಿ ಗೋ ಶಾಲೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ನಿರ್ಮಾಣ ಆಗಬೇಕು. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವುದರಿಂದ ಪ್ರತಿ ಜಿಲ್ಲೆಯಲ್ಲಿ ಗೋ ಸಂರಕ್ಷಣಾ ಕೇಂದ್ರ ಸ್ಥಾಪನೆ ಮಾಡಬೇಕು. ಇದರಿಂದ ಸ್ಥಳೀಯವಾಗಿ ಜನರಿಗೆ ಉದ್ಯೋಗ ಸಿಗಲಿದೆ ಮತ್ತು ಗೋ ಉತ್ಪನ್ನಗಳ ಸಂಶೋಧನೆ ನಡೆಸಲು ಸಹಕಾರಿಯಾಗಲಿದೆ ಎಂದರು.
ಕಾಯ್ದೆ ಜಾರಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಕೋಟ್ಯಂತರ ಹಿಂದೂಗಳು ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ತೀರ್ಪು ಬಂದಷ್ಟೇ ಗೋ ಹತ್ಯೆ ನಿಷೇಧ ಕಾಯ್ದೆ ಕೂಡ ಖುಷಿ ತಂದಿದೆ. ಇದು ನಿಜವಾದ ಗೋಕುಲಾಷ್ಟಮಿಯಾಗಿದೆ ಎಂದು ಹೇಳಿದರು.
ಕಳೆದ ಆರು ತಿಂಗಳ ಹಿಂದೆ ಅಗ್ನಿಹೋತ್ರ ಮಾಡಿದರೆ ಕೊರೋನಾ ಸೋಂಕು ಹರಡುವುದಿಲ್ಲ ಎಂದು ಸಲಹೆ ನೀಡಿದಾಗ ನಗೆಪಾಟಲಿಗೆ ಈಡಾಗಿದ್ದೆ. ಇಂದು ಕನಿಷ್ಠ ಐದು ಸಾವಿರ ಜನ ಅಗ್ನಿಹೋತ್ರ ಮಾಡುತ್ತಿದ್ದಾರೆ. ಅವರ ಕುಟುಂಬದ ಯಾವೊಬ್ಬ ಸದಸ್ಯರಿಗೂ ಕೊರೋನಾ ಬಂದಿಲ್ಲ. ಇದರಿಂದ ಗೋವಿನಲ್ಲಿರುವ ಶಕ್ತಿ ಎಂಥದ್ದು ಎಂದು ತಿಳಿಯುತ್ತದೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…