ಹಾಸನ: ಹಿಂದು-ಮುಸ್ಲಿಂ ಎಂಬ ತಾರತಮ್ಯ ಬೇಡ. ನಾವೆಲ್ಲರೂ ಒಂದೇ. ಆದರೆ, ರಾಮಮಂದಿರ ನಿರ್ಮಾಣವಾಗಲೇಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹೇಳಿದರು.
”ಸುಪ್ರೀಂ ಕೋರ್ಟ್ ರಚಿಸಿರುವ ಸಮಿತಿಗೆ ಇನ್ನೂ ಎರಡು ತಿಂಗಳ ಕಾಲಾವಕಾಶವಿದೆ. ಸಮಿತಿ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡೋಣ. ಆದರೆ, ಸಮಿತಿಯ ಸಂಧಾನದಿಂದ ಅಯೋಧ್ಯೆ ಪರಿಸ್ಥಿತಿ ಬಗೆಹರಿಯುವುದಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ,” ಎಂದರು.
ಚುನಾವಣೆ ಕುರಿತು ಮಾತನಾಡಿದ ಅವರು, ”ರಾಜಕೀಯವಾಗಿ ನಾನು ಏನನ್ನೂ ಈ ಸಂದರ್ಭದಲ್ಲಿ ಮಾತನಾಡುವುದಿಲ್ಲ. ಆದರೆ ಮತದಾರರು ದೇಶದ ಬಗ್ಗೆ ಕಾಳಜಿ ಇಟ್ಟುಕೊಂಡು ಮತದಾನ ಮಾಡಬೇಕು. ಇವತ್ತಿನ ನಾಗರಿಕರು ಪ್ರಬುದ್ಧರಿದ್ದಾರೆ. ಯಾರನ್ನು ಆರಿಸಬೇಕೆಂಬ ಅರಿವು ಅವರಿಗಿದೆ. ಯಾವುದೇ ಪಕ್ಷ ಕ್ಕೆ ಮತ ಹಾಕಿ ಎಂದು ಹೇಳುವುದಿಲ್ಲ. ನಾನು ಪಕ್ಷಾತೀತವಾಗಿ ಮತ ಚಲಾಯಿಸಿ ಎಂದು ಹೇಳುವೆ. ರಾಜ್ಯವನ್ನು ಸಮರ್ಥನೆ ಮಾಡುವ ನಾಯಕನನ್ನು ಆರಿಸುವ ಹೊಣೆಗಾರಿಕೆ ಮತದಾರರದ್ದಾಗಿರಲಿ,” ಎಂದು ನುಡಿದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…