Featured

ಅಯೋಧ್ಯೆಯಲ್ಲಿ ರಾಮ ಮಂದಿರದ ಜೊತೆಗೆ ದೂರದಲ್ಲಿ ಮಸೀದಿಯೂ ನಿರ್ಮಾಣವಾಗಲಿ, ಹಿಂದೂ ಮತ್ತು ಮುಸ್ಲಿಂ ಎಂಬ ತಾರತಮ್ಯ ಬೇಡ, ನಾವೆಲ್ಲರೂ ಒಂದೇ,” : ಪೇಜಾವರ ಶ್ರೀ -Vishwanews24

ಹಾಸನ: ಹಿಂದು-ಮುಸ್ಲಿಂ ಎಂಬ ತಾರತಮ್ಯ ಬೇಡ. ನಾವೆಲ್ಲರೂ ಒಂದೇ. ಆದರೆ, ರಾಮಮಂದಿರ ನಿರ್ಮಾಣವಾಗಲೇಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹೇಳಿದರು.

ಹಾಸನಕ್ಕೆ ಆಗಮಿಸಿದ್ದ ಶ್ರೀಗಳು ಸುದ್ದಿಗಾರರೊಂದಿಗೆ ಮಾತನಾಡಿ, ”ರಾಮಮಂದಿರ ನಿರ್ಮಾಣಕ್ಕೆ ರವಿಶಂಕರ್‌ ಗುರೂಜಿ ಮಧ್ಯಸ್ಥಿಕೆ ವಹಿಸುವ ಜವಾಬ್ದಾರಿ ನೀಡಿರುವುದನ್ನು ನಾನು ಸ್ವಾಗತಿಸುತ್ತೇನೆ. ರಾಮಮಂದಿರ ನಿರ್ಮಾಣ ಆಗಲೇಬೇಕು. ಅಯೋಧ್ಯೆಯ ಸ್ವಲ್ಪ ದೂರದಲ್ಲಿ ಮುಸಲ್ಮಾನರಿಗೂ ಮಸೀದಿ ಆಗಲಿ. ಹಿಂದೂ ಮತ್ತು ಮುಸ್ಲಿಂ ಎಂಬ ತಾರತಮ್ಯ ಬೇಡ, ನಾವೆಲ್ಲರೂ ಒಂದೇ,” ಎಂದು ಪ್ರತಿಪಾದಿಸಿದರು.

”ಸುಪ್ರೀಂ ಕೋರ್ಟ್‌ ರಚಿಸಿರುವ ಸಮಿತಿಗೆ ಇನ್ನೂ ಎರಡು ತಿಂಗಳ ಕಾಲಾವಕಾಶವಿದೆ. ಸಮಿತಿ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡೋಣ. ಆದರೆ, ಸಮಿತಿಯ ಸಂಧಾನದಿಂದ ಅಯೋಧ್ಯೆ ಪರಿಸ್ಥಿತಿ ಬಗೆಹರಿಯುವುದಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ,” ಎಂದರು.

ಚುನಾವಣೆ ಕುರಿತು ಮಾತನಾಡಿದ ಅವರು, ”ರಾಜಕೀಯವಾಗಿ ನಾನು ಏನನ್ನೂ ಈ ಸಂದರ್ಭದಲ್ಲಿ ಮಾತನಾಡುವುದಿಲ್ಲ. ಆದರೆ ಮತದಾರರು ದೇಶದ ಬಗ್ಗೆ ಕಾಳಜಿ ಇಟ್ಟುಕೊಂಡು ಮತದಾನ ಮಾಡಬೇಕು. ಇವತ್ತಿನ ನಾಗರಿಕರು ಪ್ರಬುದ್ಧರಿದ್ದಾರೆ. ಯಾರನ್ನು ಆರಿಸಬೇಕೆಂಬ ಅರಿವು ಅವರಿಗಿದೆ. ಯಾವುದೇ ಪಕ್ಷ ಕ್ಕೆ ಮತ ಹಾಕಿ ಎಂದು ಹೇಳುವುದಿಲ್ಲ. ನಾನು ಪಕ್ಷಾತೀತವಾಗಿ ಮತ ಚಲಾಯಿಸಿ ಎಂದು ಹೇಳುವೆ. ರಾಜ್ಯವನ್ನು ಸಮರ್ಥನೆ ಮಾಡುವ ನಾಯಕನನ್ನು ಆರಿಸುವ ಹೊಣೆಗಾರಿಕೆ ಮತದಾರರದ್ದಾಗಿರಲಿ,” ಎಂದು ನುಡಿದರು

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

23 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

34 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

38 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

46 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

18 hours ago