ಇಂದೋರ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಎಂದೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಉತ್ತರ ಪ್ರದೇಶದ ‘ಕೈ’ ಮುಖಂಡ ರಾಜ್ ಬಬ್ಬರ್ ಹೇಳಿದ್ದಾರೆ.
ಮಧ್ಯಪ್ರದೇಶ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷ ರಾಮ ಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿರಲಿಲ್ಲ. ಈಗ ‘ಮುಸ್ಲಿಂ ಸಮಾಜಕ್ಕೂ ಮಂದಿರ ಬೇಕೆಂದು ನಮಗನ್ನಿಸುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಚರ್ಚೆ ಮಾಡುವುದಿಲ್ಲು. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಸುಪ್ರೀಂಕೋರ್ಟ್ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. “ಆದರೆ ಬಿಜೆಪಿ ಮಾತ್ರ ಪ್ರತಿ ಚುನಾವಣೆಯಲ್ಲಿಯೂ ರಾಮ ಮಂದಿರ ವಿಷಯವನ್ನು ಮುನ್ನೆಲೆಗೆ ತರುತ್ತದೆ. ಬಿಜೆಪಿ ರಾಮನೆಡೆಗೆ ಎಂದಿಗೂ ವಿಶೇಷ ಭಾವನೆ ಹೊಂದಿರಲಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಮ, ರಾಮ ಮಂದಿರದ ಹೆಸರಿನಲ್ಲಿ ಮತ ಕೇಳುತ್ತದೆ” ಎಂದು ರಾಜ್ ಬಬ್ಬರ್ ಟೀಕಿಸಿದರು.
‘ಎಲ್ಲರೂ ರಾಮ ಮಂದಿರದ ನಿರ್ಮಾಣವನ್ನು ಬಯಸುತ್ತಾರೆ. ಮಂದಿರವನ್ನು ನಿರ್ಮಿಸಬೇಕೆಂದು ಮುಸ್ಲಿಮರು ಬಯಸುತ್ತಿದ್ದಾರೆಂದು ನಾನು ಭಾವಿಸುತ್ತೇನೆ. ಆದರೆ, ಸುಪ್ರೀಂಕೋರ್ಟ್ನಲ್ಲಿ ಈ ಪ್ರಕರಣ ಇನ್ನೂ ಬಾಕಿ ಇರುವುದರಿಂದ ಅದು(ನ್ಯಾಯಾಲಯ) ಈ ಸಮಸ್ಯೆಯನ್ನು ನಿರ್ಧರಿಸುತ್ತದೆ’ ಎಂದರು.
ರಾಮ ಮಂದಿರ ನಿರ್ಮಾಣವನ್ನು ಕಾಂಗ್ರೆಸ್ ಹಿಂದೆಯೂ ವಿರೋಧಿಸಿರಲಿಲ್ಲ. ಮುಂದೆಯೂ ವಿರೋಧಿಸುವುದಿಲ್ಲ ಬಬ್ಬರ್ ಸ್ಪಷ್ಟಪಡಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…