Featured

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ ಎಂದಿಗೂ ವಿರೋಧಿಸಿಲ್ಲ : ರಾಜ್‌ ಬಬ್ಬರ್

ಇಂದೋರ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಎಂದೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಉತ್ತರ ಪ್ರದೇಶದ ‘ಕೈ’ ಮುಖಂಡ ರಾಜ್ ಬಬ್ಬರ್ ಹೇಳಿದ್ದಾರೆ.

ಮಧ್ಯಪ್ರದೇಶ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು,  “ಕಾಂಗ್ರೆಸ್ ಪಕ್ಷ ರಾಮ ಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿರಲಿಲ್ಲ. ಈಗ ‘ಮುಸ್ಲಿಂ ಸಮಾಜಕ್ಕೂ ಮಂದಿರ ಬೇಕೆಂದು ನಮಗನ್ನಿಸುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಚರ್ಚೆ ಮಾಡುವುದಿಲ್ಲು. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಸುಪ್ರೀಂಕೋರ್ಟ್ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. “ಆದರೆ ಬಿಜೆಪಿ ಮಾತ್ರ ಪ್ರತಿ ಚುನಾವಣೆಯಲ್ಲಿಯೂ ರಾಮ ಮಂದಿರ ವಿಷಯವನ್ನು ಮುನ್ನೆಲೆಗೆ ತರುತ್ತದೆ. ಬಿಜೆಪಿ ರಾಮನೆಡೆಗೆ ಎಂದಿಗೂ ವಿಶೇಷ ಭಾವನೆ ಹೊಂದಿರಲಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಮ, ರಾಮ ಮಂದಿರದ ಹೆಸರಿನಲ್ಲಿ ಮತ ಕೇಳುತ್ತದೆ” ಎಂದು ರಾಜ್ ಬಬ್ಬರ್ ಟೀಕಿಸಿದರು.

‘ಎಲ್ಲರೂ ರಾಮ ಮಂದಿರದ ನಿರ್ಮಾಣವನ್ನು ಬಯಸುತ್ತಾರೆ. ಮಂದಿರವನ್ನು ನಿರ್ಮಿಸಬೇಕೆಂದು ಮುಸ್ಲಿಮರು ಬಯಸುತ್ತಿದ್ದಾರೆಂದು ನಾನು ಭಾವಿಸುತ್ತೇನೆ. ಆದರೆ, ಸುಪ್ರೀಂಕೋರ್ಟ್‌ನಲ್ಲಿ ಈ ಪ್ರಕರಣ ಇನ್ನೂ ಬಾಕಿ ಇರುವುದರಿಂದ ಅದು(ನ್ಯಾಯಾಲಯ) ಈ ಸಮಸ್ಯೆಯನ್ನು ನಿರ್ಧರಿಸುತ್ತದೆ’ ಎಂದರು.

ರಾಮ ಮಂದಿರ ನಿರ್ಮಾಣವನ್ನು ಕಾಂಗ್ರೆಸ್ ಹಿಂದೆಯೂ ವಿರೋಧಿಸಿರಲಿಲ್ಲ. ಮುಂದೆಯೂ ವಿರೋಧಿಸುವುದಿಲ್ಲ ಬಬ್ಬರ್ ಸ್ಪಷ್ಟಪಡಿಸಿದರು.

 

 

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

3 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

5 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

5 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

5 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

6 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

6 hours ago